ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೈದರಾಬಾದ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆ.ಚಂದ್ರಶೇಖರ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕೆಲವು ಭ್ರಷ್ಟ ಪಕ್ಷಗಳು ತಮ್ಮ ಭ್ರಷ್ಟಾಚಾರ ಮುಚ್ಚಿಡುವುದಕ್ಕಾಗಿ ತನಿಖಾ ಸಂಸ್ಥೆಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದವು. ಅಲ್ಲಿ ಆ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ.
ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ರೈಲಿಗೆ ಚಾಲನೆ, ಸಿಕಂದರಾಬಾದ್ ರೈಲು ನಿಲ್ದಾಣದ ಮರು ಅಭಿವೃದ್ಧಿಗೆ ಶಂಕುಸ್ಥಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ನಂತರ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯ ಸರ್ಕಾರದ ಅಸಹಕಾರದಿಂದಾಗಿ ತೆಲಂಗಾಣದಲ್ಲಿ ಕೇಂದ್ರದ ಅನೇಕ ಯೋಜನೆಗಳು ವಿಳಂಬವಾಗುತ್ತಿರುವ ಬಗ್ಗೆ ನನಗೆ ತುಂಬಾ ಬೇಸರವಾಗಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಅಡೆತಡೆಗಳನ್ನು ಸೃಷ್ಟಿಸದಂತೆ ನಾನು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ. ಏಕೆಂದರೆ ತೆಲಂಗಾಣ ಜನರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದರು.
“ನಾವು ಅಭಿವೃದ್ಧಿ ಕಾರ್ಯಗಳಿಗೆ ಬದ್ಧರಾಗಿದ್ದೇವೆ. ಆದರೆ ಬೆರಳೆಣಿಕೆಯಷ್ಟು ಜನರು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಗೊಂದಲಕ್ಕೀಡಾಗಿದ್ದಾರೆ. ಅವರಿಗೆ ದೇಶದ ಅಭಿವೃದ್ಧಿಯಲ್ಲಿ ಆಸಕ್ತಿ ಇಲ್ಲ. ಅವರು ಕುಟುಂಬದ ಲಾಭವನ್ನು ಮಾತ್ರ ನೋಡುತ್ತಾರೆ. ತೆಲಂಗಾಣ ಈ ಜನರ ಬಗ್ಗೆ ಬಹಳ ಎಚ್ಚರಿಕೆಯಿಂದ ಇರಬೇಕು” ಎಂದರು.
ಕೇಂದ್ರ ಸರ್ಕಾರ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು, ಬೆದರಿಸಲು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದ 14 ಪ್ರತಿಪಕ್ಷಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೆಲವು ದಿನಗಳ ಹಿಂದೆ ವಜಾಗೊಳಿಸಿತ್ತು ಎಂದರು.
“ಭ್ರಷ್ಟಾಚಾರ ಮತ್ತು ರಾಜವಂಶದ ರಾಜಕೀಯವು ಭಿನ್ನವಾಗಿಲ್ಲ ಏಕೆಂದರೆ ಭಾಯಿ-ಭಟಿಜಾಬಾದ್
ಭ್ರಷ್ಟಾಚಾರವನ್ನು ಪ್ರಾರಂಭಿಸುತ್ತಾರೆ. ಅವರು ಎಲ್ಲವನ್ನೂ ನಿಯಂತ್ರಿಸಲು ಬಯಸುತ್ತಾರೆ. ಅವರು ತಮ್ಮ ನಿಯಂತ್ರಣಕ್ಕೆ ಯಾವುದೇ ಸವಾಲನ್ನು ಇಷ್ಟಪಡುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ:Secunderabad-Tirupati ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ