ಮುಂಬೈ: ಭ್ರಷ್ಟಾಚಾರ ಪ್ರಕರಣದ ಆರೋಪಿಯಾಗಿರುವ ಮಹಾರಾಷ್ಟ್ರ ಮಾಜಿ ಅನಿಲ್ ದೇಶ್‌ಮುಖ್ ಅವರು ಮಂಗಳವಾರ ವಿಚಾರಣಾ ಸಮಿತಿ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಹಣ ಕಾಸು ಅಕ್ರಮ ಸಾಗಣೆ ಪ್ರಕರಣದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ದೇಶ್‌ಮುಖ್ ಅವರಿಗೆ ಸಮಿತಿಯ ವಿಚಾರಣೆಗೆ ಹಾಜರಾಗಲು ಶುಕ್ರವಾರ ನ್ಯಾಯಾಲಯ ಅನುಮತಿ ನೀಡಿತ್ತು.
ಆ ಹಿನ್ನೆಲೆಯಲ್ಲಿ ಅವರನ್ನು ಮಂಗಳವಾರ ವಿಚಾರಣೆಗೆ ಹಾಜರುಪಡಿಸಲಾಗಿದೆ.
ಮುಂಬೈನ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ ತಿಂಗಳಿಗೆ 100 ಕೋಟಿ ರೂ. ವಸೂಲಿ ಮಾಡಿ ಕೊಡುವಂತೆ ಅನಿಲ್ ಎಲ್ಲ ಪೊಲೀಸರಿಗೆ ಹೇಳಿದ್ದರೆಂದು ಮುಂಬೈನ ಮಾಜಿ ಪೊಲೀಸ್ ಆಯುಕ್ತರಾಗಿರುವ ಪರಂ ಬೀರ್ ಸಿಂಗ್ ಆರೋಪಿಸಿದ್ದರು. ಅದರ ವಿಚಾರಣೆ ನಡೆಸಲೆಂದು ನಿವೃತ್ತ ನ್ಯಾಯಮೂರ್ತಿ ಚಂಡೀವಾಲ್ ಅವರ ಏಕ ಸದಸ್ಯ ಸಮಿತಿ ರಚಿಸಲಾಗಿತ್ತು.
ಇದನ್ನೂ ಓದಿ:ಲಕ್ಷಾಂತರ ರೂ. ಬೆಳೆ ನಾಶವಾದ್ರೂ ತಿರುಗಿ ನೋಡಿಲ್ಲ..!