ಬೆಂಗಳೂರು: ಯಡಿಯೂರಪ್ಪ ಅವರ ಆಪ್ತ ಸಹಾಯಕರ ಮನೆ ಮೇಲೆ ನಡೆದ ತೆರಿಗೆ ಇಲಾಖೆ ದಾಳಿ ಹಿಂದೆ ಅನೇಕ ಲೆಕ್ಕಾಚಾರಗಳಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಆಂತರಿಕ ರಾಜಕೀಯ ಇದ್ದೇ ಇರುತ್ತದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಅವರು ಯಾರನ್ನಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕು ಎಂದರೆ ಅದನ್ನು ಮಾಡುತ್ತಾರೆ ಎಂದರು.
ಎರಡೂ ಕ್ಷೇತ್ರಗಳಲ್ಲಿ ಉತ್ತಮ ಬೆಂಬಲ: ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪರವಾಗಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಉತ್ಸಾಹ, ಬೆಂಬಲ ಸಿಕ್ಕಿದ್ದು, ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೂ ಇದ್ದ ಚುನಾವಣೆ ಪ್ರಚಾರದ ಅವಕಾಶವನ್ನು ರಾತ್ರಿ 7 ಗಂಟೆಗೆ ಸೀಮಿತಗೊಳಿಸಿ ಹೊಸ ನಿಯಮ ತಂದಿ¨ªಾರೆ. ನಾವು ನಮ್ಮದೇ ಆದ ತಂತ್ರಗಾರಿಕೆ ಮೂಲಕ ಪ್ರಚಾರ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಉದ್ಧವ್ ಠಾಕ್ರೆ ಮತ್ತು ನಾರಾಯಣ್ ರಾಣೆ ನಡುವೆ ಮಾತಿನ ಚಕಾಮಕಿ
ರಮೇಶ್ ಆಪ್ತರು ಭೇಟಿ ಮಾಡಿದ್ದು ನಿಜ: ರಮೇಶ್ ಜಾರಕಿಹೊಳಿ ಅವರ ಆಪ್ತರು ನನ್ನನ್ನು ಬಂದು ಭೇಟಿ ಮಾಡಿದ್ದರು. ಅನೇಕ ವಿಚಾರ ಚರ್ಚೆ ಮಾಡಿದ್ದಾರೆ. ಅವರ ಸಂದೇಶಗಳನ್ನು ತಿಳಿಸಿದ್ದಾರೆ. ಈ ವಿಚಾರಗಳನ್ನು ನಾನು ಈಗ ಗೌಪ್ಯವಾಗಿ ಇಡಬೇಕಿದೆ. ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.