Advertisement
ಕೇಂದ್ರ ಸರ್ಕಾರ 8 ವರ್ಷ ಆಡಳಿತ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 8 ವರ್ಷದ ಅವಧಿಯಲ್ಲಿ ಆಯುಷ್ಮಾನ್ ಭಾರತ್, ಉಜ್ವಲ ಯೋಜನೆ, ಜನ್‌ಧನ್ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಬೆಳೆವಿಮಾ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ, ಸ್ವತ್ಛ ಭಾರತ್, ಮುದ್ರಾ ಯೋಜನೆಗಳನ್ನು ಜಾರಿಗೊಳಿಸಿ ಎಲ್ಲಾ ಸಮುದಾಯಗಳ ಏಳಿಗೆಗೆ ಶ್ರಮಿಸಿದ್ದಾರೆ ಎಂದರು.
Related Articles
Advertisement
ಬೆಳೆವಿಮೆ ಯೋಜನೆಯಡಿ 24,224 ಫಲಾನುಭವಿಗಳು 98 ಕೋಟಿ ಹಣ ಪಡೆದಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 7858 ಫಲಾನುಭವಿಗಳು ಮನೆ ನಿರ್ಮಿಸಿಕೊಂಡಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಸ್ವ-ಸಹಾಯ ಸಂಘಗಳು, ಪಶು ಸಂಗೋಪನಾ ಯೋಜನೆ, ಸ್ವಯಂ ಉದ್ಯೋಗ, ಕೃಷಿ ಯಂತ್ರೋಪಕರಣ, ರೇಷ್ಮೆ, ಹನಿ ನೀರಾವರಿ ಯೋಜನೆ ಹೀಗೆ ಅನೇಕ ಯೋಜನೆಗಳ ಸದುಪಯೋಗವನ್ನು ಜಿಲ್ಲೆಯ ಜನತೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು.
ವಿಪಕ್ಷಗಳಿಗೆ ವಿರೋಧ ಮಾಡಲು ಯಾವುದೇ ವಿಚಾರಗಳು ಇಲ್ಲವಾಗಿದ್ದು, ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಂದೇ ಒಂದು ಕಪ್ಪುಚುಕ್ಕೆ ಇಲ್ಲದಂತೆ ಯಶಸ್ವಿ ಆಡಳಿತವನ್ನು ನೀಡಿದ್ದಾರೆ. ಜಿಲ್ಲೆಯ ಕಡೂರು, ತರೀಕೆರೆ, ಚಿಕ್ಕಮಗಳೂರು ಭಾಗದ 200 ಕೆರೆಗಳನ್ನು ತುಂಬಿಸುವ ಯೋಜನೆಗೆ ಮೊದಲ ಹಂತದ ಅನುದಾನ ಬಿಡುಗಡೆ ಮಾಡಲಾಗಿದೆ. 2ನೇ ಹಂತದ ಅನುದಾನ ಶೀಘ್ರವೇ ಬಿಡುಗಡೆಗೊಳಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಪ್ರತೀ ಮನೆಗೂ ಶುದ್ಧ ಕುಡಿಯುವ ನೀರು ಕೊಡುವ ಯೋಜನೆ ನಮ್ಮ ಜಿಲ್ಲೆಗೂ ಮಂಜೂರಾಗಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ. ಕಲ್ಮುರುಡಪ್ಪ ಮಾತನಾಡಿ, ಜೂ.8ರಿಂದ ಪಕ್ಷದಿಂದ ಪ್ರತೀ ತಾಲೂಕಿನಲ್ಲಿ ಸರ್ಕಾರದ ಫಲಾನುಭವಿಗಳ ಜೊತೆ ಸಂವಾದ ನಡೆಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಯುವ ಮೋರ್ಚಾ ವತಿಯಿಂದ ಜೂ.14 ಮತ್ತು 15ರಂದು ಬೈಕ್ ರ್ಯಾಲಿ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನತೆಗೆ ತಿಳಿಸುವ ಕೆಲಸ ಮಾಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಆನಂದಪ್ಪ, ಕವಿತಾ ಶೇಖರ್, ರವೀಂದ್ರ ಬೆಳವಾಡಿ, ದೀಪಕ್ ದೊಡ್ಡಯ್ಯ ಇದ್ದರು.