Advertisement
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ ಎರಡು ಬಾರಿ ರಾಜಸ್ವ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಎರಡು, ಮೂರು ವರ್ಷ ಹೀಗೆಯೇ ಮುಂದುವರಿದರೆ ಸಾಲದ ಸುಳಿಯಲ್ಲಿ ರಾಜ್ಯ ಸಿಲುಕಿಕೊಳ್ಳುತ್ತದೆ. ಸಿದ್ದರಾಮಯ್ಯ ಹಿಂದಿನ ಬಜೆಟ್‌ಗಳಲ್ಲಿ ರಾಜಸ್ವ ಕೊರತೆ ಇಲ್ಲದ ಬಜೆಟ್ ಕೊಟ್ಟಿದ್ದೇನೆ ಎಂದು ಗರ್ವದಿಂದ ಹೇಳುತ್ತಿದ್ದರು.
ಲಂಚ ಕೊಡಬೇಕಿದೆ. ಈ ಕುರಿತು ಬಿಜೆಪಿ ಹೈಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್ ಸರ್ಕಾರಕ್ಕೆ ಎಲ್ಲ ಆಸ್ಪತ್ರೆಗಳಿಗೆ ಪ್ಯಾರಾಸಿಟಮಲ್ ಔಷಧ ಸರಬರಾಜು ಮಾಡಲಾಗುತ್ತಿಲ್ಲ. ಬಿತ್ತನೆ ಬೀಜ, ಪೆಟ್ರೋಲ್
ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ರಾಜ್ಯದ ಹಾಲು ಉತ್ಪಾದಕರಿಗೆ ಸರ್ಕಾರ 1,450 ಕೋಟಿ ರೂ. ಸಹಾಯಧನ ಬಾಕಿ ಉಳಿಸಿಕೊಂಡಿದೆ. ರೈತರ ಹಣ ಬಾಕಿ ಉಳಿಸಿಕೊಂಡ ಹೊಣೆಗೇಡಿ ಸರ್ಕಾರ ಇದು. ಸಾರಿಗೆ ನಿಗಮದ ನೌಕರರಿಗೆ 1,200 ಕೋಟಿಗೂ ಅಧಿಕ ಗ್ರ್ಯಾಚುಟಿ ಹಣ ಬಾಕಿ ಉಳಿಸಿಕೊಂಡಿದೆ ಎಂದರು.
Related Articles
Advertisement
ಶಿಗ್ಗಾವಿಗೆ ಅರ್ಹ ಅಭ್ಯರ್ಥಿ ಆಯ್ಕೆ ಶಿಗ್ಗಾವಿ ಉಪ ಚುನಾವಣೆ ಸಿದ್ಧತೆ ಕುರಿತು ರಾಜ್ಯ ಪ್ರಭಾರಿ ನೇತೃತ್ವದಲ್ಲಿ ಶೀಘ್ರದಲ್ಲೇ ಸಭೆ ನಡೆಯಲಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ನಿರಂತರವಾಗಿ ಗೆಲುವು ಸಾಧಿ ಸಿದೆ. ಭರತ ಬೊಮ್ಮಾಯಿ ಸೇರಿದಂತೆ ಹಲವರುಟಿಕೆಟ್ ಆಕಾಂಕ್ಷಿಗಳಿದ್ದಾರೆ. ಕುಟುಂಬ ರಾಜಕಾರಣವನ್ನು ಬಿಜೆಪಿ ಯಾವತ್ತೂ ವಿರೋ ಧಿಸಿದೆ. ಸಮೀಕ್ಷೆ ಮಾಡಿದ ಬಳಿಕ ಹೈಕಮಾಂಡ್ ಅರ್ಹರನ್ನು ಆಯ್ಕೆ ಮಾಡುತ್ತದೆ ಎಂದು ಪಿ. ರಾಜೀವ್ ಹೇಳಿದರು.