Advertisement

ಟೆಂಡರ್‌ನಲ್ಲಿ ಭ್ರಷ್ಟಾಚಾರ: ಸಿಇಒ ಅಮಾನತಿಗೆ ಆಗ್ರಹ

03:49 PM May 01, 2022 | Team Udayavani |

ಸುರಪುರ: ಕೆಬಿಜೆಎನ್‌ಎಲ್‌ ಇಲಾಖೆಯ ವಿವಿಧ ಟೆಂಡರ್‌ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಈ ಕುರಿತು ತನಿಖೆ ನಡೆಸಿ ಭೀಮರಾಯನ ಗುಡಿಯ ಇಸಿಒ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ದಲಿತ ಸಮಿತಿ (ಭೀಮವಾದ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿದರು.

Advertisement

ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಭೀಮರಾಯ ಸಿಂಧಗೇರಿ ಮಾತನಾಡಿ ಶಹಾಪುರ ತಾಲೂಕಿನ ಬೊಮ್ಮನಳ್ಳಿ ಫಿಲಿಂಗ್‌ ಟ್ಯಾಂಕ್‌ ಕಾಮಗಾರಿಯಲ್ಲಿ ಬೋಗಸ್‌ ನಡೆದಿದೆ. ಅದರಂತೆ ಇತರೆ ಕಾಮಗಾರಿಯಲ್ಲೂ ಬೋಗಸ್‌ ಮಾಡಲಾಗಿದೆ. ಟೆಂಡರ್‌ ನಿಯಮಗಳನ್ನು ಗಾಳಿಗೆ ತೂರಿ ಮನಸ್ಸೋ ಇಚ್ಛೆ ಎಂಬಂತೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ಟೆಂಡರ್‌ ರದ್ದುಪಡಿಸಿ ಪುನಃ ಟೆಂಡರ್‌ ಕರೆದು ತಮಗೆ ಬೇಕಾದ ಗುತ್ತಿಗೆದಾರರಿಗೆ ಟೆಂಡರ್‌ ನೀಡಿದ್ದಾರೆ ಎಂದು ದೂರಿದರು.

ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಇಲಾಖೆಯ ಸಿಇಒ ಮತ್ತು ಎಸ್‌ಇ ಅವರನ್ನು ಅಮಾನತು ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಶಿರಸ್ತೇದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next