Advertisement
ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಕೋ ಲಾರ-ಚಿಕ್ಕಬಳ್ಳಾಪುರ ಜಿಲ್ಲೆಯನ್ನು ತಮ್ಮ ಕಪಿ ಮುಷ್ಠಿಯಲ್ಲಿ ಇಟ್ಟುಕೊಂಡು ರಾಜಕೀಯ ಬೇಳೆ ಬೇಯಿ ಸಿಕೊಳ್ಳಲು ಹೊರಟಿ ರುವ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್‌ಕುಮಾರ್‌ರ ತಂತ್ರಗಾರಿಕೆ ನಡೆಯುವುದಿಲ್ಲ. ಡಿಸಿಸಿ ಬ್ಯಾಂಕಿಗೆ ರಮೇಶ್‌ಕುಮಾರ್ ಅವರು ರಿಂಗ್ ಮಾಸ್ಟರ್ ಆಗಿದ್ದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕೇವಲ ಆ್ಯಕ್ಟರ್ ಆಗಿದ್ದಾರೆ ಎಂದು ಲೇವಡಿ ಮಾಡಿದರು.
Related Articles
Advertisement
ಶಕುನಿ ಪಾತ್ರ ವಹಿಸುತ್ತಿರುವ ಶಿವಶಂಕರರೆಡ್ಡಿ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮಾಡಲು ಪ್ರಯತ್ನ ಮಾಡಿ ಇದೀಗ ಅದನ್ನು ವಿರೋಧಿಸುವ ಮೂಲಕ ಗೌರಿಬಿದನೂರು ಶಾಸಕ ಶಿವಶಂಕರರೆಡ್ಡಿ ಅವರು ಶಕುನಿಯಂತೆ ವರ್ತಿಸುತ್ತಿ ದ್ದಾರೆ. ಜಿಲ್ಲೆಯಲ್ಲಿ ನನಗೆ ಎಲ್ಲಿ ಒಳ್ಳೆಯ ಹೆಸರು ಬರುತ್ತದೆ ಎಂಬ ಏಕೈಕ ಕಾರಣಕ್ಕಾಗಿ ರಾಜಕೀಯ ದುರುದ್ದೇಶದಿಂದ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಮಾಡಲು ಹೊರಟಿದ್ದಾರೆ ಎಂದರು.
ಶ್ರೀನಿವಾಸ್‌ಗೌಡರಿಗೆ ಮಕ್ಮಲ್ ಟೋಪಿ: ಕೋಲಾರ ಕ್ಷೇತ್ರ ಶಾಸಕ ಕೆ.ಶ್ರೀನಿವಾಸ್‌ಗೌಡ ಅವರು ಒಂದು ಬಾರಿಗೆ ರಮೇಶ್‌ಕುಮಾರ್‌ರನ್ನು ನಂಬಿ ಕೆಟ್ಟಿದ್ದಾರೆ. ಮತ್ತೂಮ್ಮೆ ನಂಬುವುದಕ್ಕೆ ಹೊರಟಿದ್ದಾರೆ. ಹೇಗೋ ಅವರನ್ನು ಮಕ್ಮಲ್ ಟೋಪಿ ಹಾಕಿದ್ದಾರೆ ಜತೆಗೆ ಡಿಸಿಸಿ ಬ್ಯಾಂಕಿನಿಂದ ಕೋಲಾರ ಕ್ಷೇತ್ರದ ಜನರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡುವ ಆಮಿಷ ಒಡ್ಡಿದ್ದಾರೆ.
ರಾಜ್ಯ ದಲ್ಲಿ ಕೋಲಾರ ಡಿಸಿಸಿ ಬ್ಯಾಂಕನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊ ಳ್ಳುತ್ತಿದ್ದಾರೆ. ಸಾಲ ವಿತರಣೆ ಯಲ್ಲೂ ತಾರತಮ್ಯ ನೀತಿ ಅನುಸರಿಸುತ್ತಿದ್ದು ಬ್ಯಾಂಕಿನ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಶಾಮೀಲಾಗಿರು ವವರನ್ನು ಜೈಲಿಗೆ ಕಳುಹಿಸುವವರೆಗೂ ವಿರಮಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.
ಕೆ.ಎಚ್.ಮುನಿಯಪ್ಪರನ್ನು ಸೋಲಿಸಿದ ಮಹಾನುಭಾವರು: ಕೋಲಾರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರು ರಮೇಶ್‌ಕುಮಾರ್ ಮತ್ತಿತರರನ್ನು ಕಾಂಗ್ರೆಸ್‌ಗೆ ಕರೆ ತಂದರು. ಇವರೆಲ್ಲಾ ಸೇರಿ ಅವರನ್ನೇ ಸೋಲಿಸಿದರು. (ಕೆ.ಎಚ್.ಮುನಿಯಪ್ಪ) ಇಂತಹವರ ವಿರುದ್ಧ ಕ್ರಮ ಜರುಗಿಸುವ ಬದಲಿಗೆ ಅವರನ್ನು ಕಾಂಗ್ರೆಸ್ ಶಿಸ್ತು ಸಮಿತಿಯಲ್ಲಿ ಸ್ಥಾನಮಾನ ಕೊಟ್ಟಿರುವುದು ಆ ಪಕ್ಷದ ದಿವಾಳಿ ತನಕ್ಕೆ ಸಾಕ್ಷಿ.
ಇದು ಕಾಂಗ್ರೆಸ್ ಹಣೆಬರಹ ಎಂದು ವ್ಯಂಗ್ಯ ಮಾಡಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಉತ್ತರಾಖಂಡದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಎಲ್ಲಾ ಪ್ರಯತ್ನ ಮಾಡಿ ಕನ್ನಡಿಗ ರನ್ನು ಸುರಕ್ಷಿತವಾಗಿ ಕರೆ ತರುತ್ತೇವೆ ಎಂದ ಸಚಿವರು, ಮುಖ್ಯಮಂತ್ರಿಗಳು ಹಾನ್‌ಗಲ್ ಉಪ ಚುನಾವಣೆಗೆ ಜವಾಬ್ದಾರಿ ನೀಡಿದ್ದಾರೆ. ಅದನ್ನು ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದರು.
ರಮೇಶ್‌ಕುಮಾರ್-ಶಿವಶಂಕರರೆಡ್ಡಿ ಅಡ್ಡಗಾಲು-
ಕೋಲಾರ -ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಆಡಳಿತ ಮಂಡಳಿ ಕಾರ್ಯಕಾರಿ ಸಮಿತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಮಾಡಲು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ.
ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡಲು ಮಾಜಿ ಸ್ಪೀಕರ್ ರಮೇಶ್‌ಕುಮಾರ್, ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಅವರು ಅಡ್ಡಗಾಲು ಹಾಕಲು ಹೊರಟಿದ್ದಾರೆ. ಇಂತಹವರು 100 ಜನ ಅಡ್ಡ ಬಂದರೂ ಚಿಕ್ಕಬಳ್ಳಾಪುರ ಜಿಲ್ಲೆ ಜನ ಮತ್ತು ರೈತರ ಹಕ್ಕುಗಳಿಗಾಗಿ ಹೋರಾಟ ನಡೆಸಿ ಶತಾಯಗತಾಯ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಸ್ಥಾಪಿಸುವುದೇ ತನ್ನ ಮುಖ್ಯ ಗುರಿ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.