Advertisement

ವೈದ್ಯಕೀಯ ಪರಿಕರ ಖರೀದಿಯಲ್ಲಿ ಭ್ರಷ್ಟಾಚಾರ

11:22 AM Aug 05, 2020 | Suhan S |

ಶಿಡ್ಲಘಟ್ಟ: ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ರಾಜ್ಯದ ಜನರಿಗೆ ಸತ್ಯಾಂಶ ತಿಳಿಸಲು ಖರ್ಚು ವೆಚ್ಚಗಳ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮಾಜಿ ಸಚಿವ ಟಿ.ಬಿ.ಜಯಚಂದ್ರ ಆಗ್ರಹಿಸಿದರು.

Advertisement

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಪರಿಕರಗಳ ಖರೀದಿಯಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿದ ಕಾಂಗ್ರೆಸ್‌ ಪಕ್ಷದ ಮುಖಂಡರಿಗೆ ನೋಟಿಸ್‌ ಕೊಟ್ಟರೆ ಹೆದರುವುದಿಲ್ಲ. ಧರ್ಯವಿದ್ದರೆ ಬಿಜೆಪಿ ಮುಖಂಡರು ಈ ವಿಚಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಿ ಎಂದು ಛೇಡಿಸಿದರು.

ಲೂಟಿಯಲ್ಲಿ ನಿರತ: ರಾಜ್ಯದಲ್ಲಿ ಲಾಕ್‌ಡೌನ್‌ ಮಾಡಿದರೂ ಸಹ ಕೋವಿಡ್ ಸೋಂಕು ನಿಯಂತ್ರಣ ಆಗಿಲ್ಲ. ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಮೃತಪಟ್ಟಿದ್ದಾರೆ. ಜನರ ಆರೋಗ್ಯ ಕಾಪಾಡಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ಹೆಸರಿನಲ್ಲಿ ಲೂಟಿ ಮಾಡುವುದರಲ್ಲಿ ನಿರತವಾಗಿವೆ ಎಂದು ಆರೋಪಿಸಿದರು. ಪರಿಕರ ಖರೀದಿಯಲ್ಲಿ ಪಾರದರ್ಶಕ ನೀತಿ ಅನುಸರಿಸಿದ್ದರೆ ಸಾರ್ವಜನಿಕವಾಗಿ ಲೆಕ್ಕ ಕೊಡಲು ಇರುವ ತೊಂದರೆ ಏನು ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಜನರು ಕಷ್ಟ ಅನುಭವಿಸುತ್ತಿದ್ದರೂ ಪರಿಹರಿಸಲು ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದರು.

ಕೋವಿಡ್ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿಸುವ 20 ಲಕ್ಷ ಕೋಟಿ ಪ್ಯಾಕೇಜ್‌ ಏನಾಯಿತು ಎಂಬುದು ಬಿಜೆಪಿ ಪಕ್ಷದ ನಾಯಕರು ಸ್ಪಷ್ಟ ಪಡಿಸಲಿ ಎಂದು ಆಗ್ರಹಿಸಿದರು. ರಾಜ್ಯಕ್ಕೆ ಪ್ಯಾಕೇಜ್‌ನಲ್ಲಿ ಎಷ್ಟು ಅನುದಾನ ಬಂದಿದೆ, ಯಾವ ಕ್ಷೇತ್ರದಲ್ಲಿ ಖರ್ಚು ಮಾಡಲಾಗಿದೆ ಎಂಬುದನ್ನು ಮಾಹಿತಿ ನೀಡಲಿ. ಬದಲಾಗಿ ಭ್ರಷ್ಟಾಚಾರದ ಬಗ್ಗೆ ಪ್ರಶ್ನಿಸುವ ಮುಖಂಡರಿಗೆ ನೋಟಿಸ್‌ ನೀಡಿ ಬೆದರಿಸುವ ತಂತ್ರಗಾರಿಕೆಗಳಿಗೆ ಕಾಂಗ್ರೆಸ್‌ ಪಕ್ಷ ಜಗ್ಗುವುದಿಲ್ಲ. ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ವಿ.ಮುನಿಯಪ್ಪ, ಎನ್‌.ಎಚ್‌.ಶಿವಶಂಕರರೆಡ್ಡಿ, ಎಸ್‌. ಎನ್‌.ಸುಬ್ಟಾರೆಡ್ಡಿ, ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ನಂದಿ ಆಂಜನಪ್ಪ, ಯಲುವಹಳ್ಳಿ ರಮೇಶ್‌, ಮಾಜಿ ಶಾಸಕ ಎಸ್‌.ಎಂ.ಮುನಿಯಪ್ಪ, ನವೀನ್‌ ಕಿರಣ್‌, ವಿನಯ್‌, ಕುಂದಲಗುರ್ಕಿ ಮುನೀಂದ್ರ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next