Advertisement

ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್‌ನ ಅವಿಭಾಜ್ಯ ಅಂಗ: CM ಬೊಮ್ಮಾಯಿ

12:47 AM Apr 26, 2023 | Team Udayavani |

ಹುಬ್ಬಳ್ಳಿ: ಭ್ರಷ್ಟಾಚಾರ ಕಾಂಗ್ರೆಸ್‌ನ ಅವಿಭಾಜ್ಯ ಅಂಗ. ಅವರು ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟ ಎಂದು ಹೇಳಿ ಸಿದ್ದರಾಮಯ್ಯ ಪೇಚಿಗೆ ಸಿಲುಕಿದರು. ಅದನ್ನು ಸರಿದೂಗಿಸುವ ಯತ್ನ ಸಹ ಮಾಡಿದರು. ನನ್ನ ಮೇಲೆ ಹೊರಿಸಿದ ಭ್ರಷ್ಟಾಚಾರದ ಆರೋಪ ಸಾಬೀತುಪಡಿಸಲಿ. ಸುಮ್ಮನೆ ಆರೋಪ ಮಾಡುವುದಲ್ಲ. ಭ್ರಷ್ಟಾಚಾರ ಎಂದರೆ ಕಾಂಗ್ರೆಸ್‌. ಆ ಪಕ್ಷದ ನಾಯಕರ ವಿರುದ್ಧ ಹಲವಾರು ಭ್ರಷ್ಟಾಚಾರ ಪ್ರಕರಣಗಳಿವೆ. ಈಗಾಗಲೇ ಇಂತಹ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ನೀಡಲಾಗಿದ್ದು, ಮೊದಲು ಅದಕ್ಕೆ ಉತ್ತರಿಸಲಿ. ಕಾಂಗ್ರೆಸ್‌ನ ಹಲವು ನಾಯಕರು ಜೈಲಿಗೆ ಹೋಗಿದ್ದಾರೆ. ಹೀಗಿರುವಾಗ ನನ್ನ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದರು.

ಪಕ್ಷದ ಜಯವಾಹಿನಿ ರೋಡ್‌ ಶೋ ಹಾಗೂ ಪ್ರಚಾರ ಸಭೆಗಳಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ ಎಂಬುದಕ್ಕೆ ಇದೇ ಸಾಕ್ಷಿ. ಪ್ರಧಾನಿ ಮೋದಿ, ಅಮಿತ್‌ ಶಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಅನುಮಾನವಿಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಲು ಸೂಕ್ತ ಸಲಹೆ, ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕಾರ್ಯಕ್ರಮಗಳ ಪ್ರಚಾರ ಮಾಡಿ ಜನರ ಮನವೊಲಿಸಲು ತಿಳಿಸಿದ್ದಾರೆ. ಪ್ರಧಾನಿಯಿಂದ ಹಿಡಿದು ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದಾರೆ. ಕೆಲವು ಕಾರ್ಯಕ್ರಮ ಓವರ್‌ಲ್ಯಾಪ್‌ ಆಗುತ್ತಿದ್ದು, ಪರಿಶೀಲಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next