Advertisement

Corruption: ರಾಜ್ಯ ಸರಕಾರ ಕೋಮಾ ಸ್ಥಿತಿಗೆ ತಲುಪಿದೆ: ವಿಪಕ್ಷ ನಾಯಕ ಆರ್‌. ಅಶೋಕ್‌

12:42 AM Sep 04, 2024 | Team Udayavani |

ಬೆಂಗಳೂರು: ಹಗರಣಗಳಿಂದಾಗಿ ರಾಜ್ಯ ಸರಕಾರ ಕೋಮಾ ಸ್ಥಿತಿಗೆ ಹೋಗಿದ್ದು ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ. ಮುಡಾದಲ್ಲಿ ಸಿಕ್ಕಿ ಹಾಕಿಕೊಂಡ ಅನಂತರ ಕಾಂಗ್ರೆಸ್‌ನವರಿಗೆ ತಲೆ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

Advertisement

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತ ವಾಗಿ ಓಡಾಡುವ ಗ್ಯಾರಂಟಿಯನ್ನು ಸರಕಾರ ನೀಡಬೇಕು. ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಅಂಗನವಾಡಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವುದಕ್ಕೆ ಸಾಧ್ಯವಾಗಿಲ್ಲ. ಆದರೆ ರೀಲ್ಸ್‌  ಮಾಡಲು 60-70 ಕೋಟಿ ರೂ. ನೀಡುತ್ತಿದ್ದಾರೆ. ಅದೇ ಹಣದಲ್ಲಿ ಶಾಲೆಗಳ ದುರಸ್ತಿ ಮಾಡಬಹುದಿತ್ತು. ಕೋವಿಡ್‌ ವಿಚಾರದಲ್ಲೂ ತನಿಖಾ ಆಯೋಗ ಮಾಡಿದ್ದು ಅರ್ಧದಲ್ಲೇ ವರದಿ ಪಡೆದು ದ್ವೇಷ ರಾಜಕಾರಣ ಮಾಡಲಾಗಿದೆ. ಕಾಂಗ್ರೆಸ್‌ ವಿಪಕ್ಷದಲ್ಲಿದ್ದಾಗಲೇ ಇದರ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು ಎಂದರು.

ರಾಜೀನಾಮೆ ನೀಡಿ: ಸಿದ್ದರಾಮಯ್ಯ ಮುಡಾ ಹಗರಣ ಬಯಲಿಗೆ ಬಂದಾಗಿನಿಂದ ಮಂಕಾಗಿದ್ದಾರೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.