Advertisement
ಅಂಬಾಗಿಲಿನಲ್ಲಿ ಮಂಗಳವಾರ ನಡೆದ ಉಡುಪಿ ಜಿಲ್ಲಾ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಮಾತನಾಡಿದರು. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪ್ರತೀ ಕ್ಷೇತ್ರಕ್ಕೆ 2 ಸಾವಿರ ಕೋ. ರೂ. ಅನುದಾನ ನೀಡುತ್ತಿದ್ದರು. ಆದರೆ ಪ್ರಸ್ತುತ ರಾಜ್ಯ ಸರಕಾರ 1 ರೂ. ಕೂಡ ಅನುದಾನ ನೀಡಿಲ್ಲ. ಮುಖ್ಯಮಂತ್ರಿಗಳಂತೆ ಉಪಮುಖ್ಯಮಂತ್ರಿಗಳು ಕೂಡ ಬೆಂಗಳೂರು ಬಿಟ್ಟರೆ ಬೇರೆ ಜಿಲ್ಲೆಗಳ ಬಗ್ಗೆ ಆಸಕ್ತಿಯೇ ಇಲ್ಲದಂತಿದ್ದಾರೆ.
ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿಯೇ ಮರೀಚಿಕೆಯಾಗಿದೆ. ಅವರ ಪಕ್ಷದವರೇ ಆರೋಪಗಳನ್ನು ಮಾಡುತ್ತಿದ್ದಾರೆ. ಸಿದ್ಧರಾಮಯ್ಯ ಹೋದ ಮೇಲೆ ಕಾಂಗ್ರೆಸ್ ಇರುವುದಿಲ್ಲ. ಅಧಿಕಾರ ಇಲ್ಲದಿದ್ದರೆ ಸಿದ್ದರಾಮಯ್ಯ ಪಕ್ಷವನ್ನೂ ಒಗ್ಗೂಡಿಸಲು ಬಿಡುವುದಿಲ್ಲ ಎಂದರು.
Related Articles
Advertisement
ಕ್ಯಾ| ಬ್ರಿಜೇಶ್ ಚೌಟ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಿಶೋರ್ ಕುಮಾರ್ ಕುಂದಾಪುರ ಸ್ವಾಗತಿಸಿದರು. ದಿನಕರ ಶೆಟ್ಟಿ ಹೆರ್ಗ ನಿರೂಪಿಸಿದರು. ರಾಘವೇಂದ್ರ ಕುಂದರ್ ವಂದಿಸಿದರು.
ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ!ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಜನರಿಗೆ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಹೇಳಿರುವಂತಹ 5 ಗ್ಯಾರಂಟಿಗಳನ್ನೇ ನೀಡುತ್ತಿಲ್ಲ. ಈ ಸರಕಾರ ಉರುಳುವುದೇ 6ನೇ ಗ್ಯಾರಂಟಿಯಾಗಿದೆ. ಪಕ್ಷದ ಪ್ರಮುಖರೇ ಪ್ರತಿದಿನ ಜೈಲಿಗೆ ಹೋಗಿ ಜಾಮೀನು ಮೂಲಕ ಹೊರಗೆ ಬರುತ್ತಿದ್ದಾರೆ ಎಂದರು.