Advertisement

Council By Polls: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾದ ರಾಜು ಪೂಜಾರಿ

08:13 PM Oct 02, 2024 | Team Udayavani |

ಉಡುಪಿ: ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಯಾಗಿ ಸಹಕಾರಿ ಧುರೀಣ ರಾಜು ಪೂಜಾರಿ ಅವರನ್ನು ಎಐಸಿಸಿ ಘೋಷಿಸಿದೆ.

Advertisement

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶದ ಮೇರೆಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ರಾಜು ಪೂಜಾರಿ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕ್ಷೇತ್ರವು  ದ್ವಿಸದಸ್ಯ ಕ್ಷೇತ್ರವಾಗಿದ್ದು, 2021ರಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನಿಂದ ಮಂಜುನಾಥ ಭಂಡಾರಿ ಅವರು ಗೆಲುವು ಸಾಧಿಸಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಕೋಟ  ಶ್ರೀನಿವಾಸ ಪೂಜಾರಿ  ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಕಾರಣ ಈಗ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿಯು ಕಿಶೋರ್‌ ಕುಮಾರ್‌ ಬೊಟ್ಯಾಡಿಯವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು ನಾಮಪತ್ರ ಸಲ್ಲಿಕೆಗೆ ನಾಳೆ (ಅ. 3) ಕೊನೆ ದಿನವಾಗಿದೆ.

ಕಾಂಗ್ರೆಸ್‌ನಿಂದ ಈ ಕ್ಷೇತ್ರಕ್ಕೆ  ಭುಜಂಗ ಶೆಟ್ಟಿ ಹಾಗೂ ಕಾರ್ಕಳದ ಟಿ.ಆರ್‌.ರಾಜು ಅವರ ಹೆಸರು ಕೇಳಿ ಬರುತ್ತಿದ್ದವು ಅಂತಿಮವಾಗಿ ರಾಜು ಪೂಜಾರಿಯವರ  ಹೆಸರನ್ನು ಎಐಸಿಸಿ ಅಂತಿಮಗೊಳಿಸಿ ಪ್ರಕಟಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next