ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಅಧಿಕೃತವಾಗಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಟಿಕೆಟ್ ನಿರಾಕರಿಸಲಾಗಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ.
ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಲಕ್ಷ್ಮಣ ಸವದಿ, ಹೇಮಲತಾ ನಾಯಕ್, ಕೇಶವ ಪ್ರಸಾದ್ ಮತ್ತು ಚಲವಾದಿ ನಾರಾಯಣ ಸ್ವಾಮಿಗೆ ಟಿಕೆಟ್ ಅಂತಿಮ ಮಾಡಲಾಗಿದೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಸವರಾಜ ಹೊರಟ್ಟಿಯವರಿಗೆ ಟಿಕೆಟ್ ನೀಡಲಾಗಿದೆ.
ಇದನ್ನೂ ಓದಿ:ಬಸವರಾಜ ಹೊರಟ್ಟಿಗೆ ಶಿಷ್ಯನೇ ಎದುರಾಳಿ
ವಿಜಯೇಂದ್ರಗೆ ಟಿಕೆಟ್ ಕೈ ತಪ್ಪಿದ್ದು ರಾಜಕೀಯ ವಲಯದಲ್ಲಿ ನಾನಾ ಚರ್ಚೆಗೆ ಕಾರಣವಾಗಿದೆ. ವಿಜಯೇಂದ್ರ ಕಾರಣಕ್ಕೆ ಅಭ್ಯರ್ಥಿಗಳ ಲಿಸ್ಟ್ ಅಂತಿಮಗೊಳಿಸಲು ತಡರಾತ್ರಿವರೆಗೆ ಕಸರತ್ತು ನಡೆಸಲಾಗಿತ್ತು. ಆದರೆ ವಿಜಯೇಂದ್ರಗೆ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ ಆರೋಪಕ್ಕೆ ತುತ್ತಾಗುವ ಆತಂಕದಿಂದ ಬಿಜೆಪಿ ವರಿಷ್ಠರು ಹಿಂದೇಟು ಹಾಕಿದ್ದಾರೆ ಎನ್ನುತ್ತಿವೆ ಮೂಲಗಳು.