ಮೈಸೂರು: ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ 12213 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.
ಗೆಲುವಿನ ಕೋಟ 46083 ನಿಗದಿಯಾಗಿದ್ದು, ಇದನ್ನು ತಲುಪಲು ಕಾಂಗ್ರೆಸ್ ಅಭ್ಯರ್ಥಿ ಕೊನೆಯವರೆಗೂ ಹೋರಾಡಿದರು. ಬಳಿಕ ಬಿಜೆಪಿ ಅಭ್ಯರ್ಥಿ ಮತಪತ್ರದಲ್ಲಿ ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ಕೋಟ ತಲುಪಿದರು.
ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ 33870 ಮತ ಪಡೆದುಕೊಂಡಿದ್ದು, ದಕ್ಷಿಣ ಪದವೀಧರರ ಕ್ಷೇತ್ರದ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಕಾಂಗ್ರೆಸ್ ತನ್ನ ಖಾತೆ ತೆರೆದಿದೆ.
ಇದನ್ನೂ ಓದಿ:ಯಾರ್ಯಾರ ಮನೆ ಕದ ನಾನ್ಯಾಕೆ ತಟ್ಟಲಿ: ಮೋಟಮ್ಮಗೆ ಎಂ.ಪಿ.ಕುಮಾರಸ್ವಾಮಿ ತಿರುಗೇಟು
Related Articles
ಮತ ಎಣಿಕೆ ಕಾರ್ಯ ಬುಧವಾರ ಬೆಳಗ್ಗೆಯಿಂದ ಗುರುವಾರ ಮಧ್ಯಾಹ್ನದವರೆಗೆ ನಿರಂತರವಾಗಿ ನಡೆಯಿತು.
ಕಾಂಗ್ರೆಸ್- ಬಿಜೆಪಿ ಸಮಬಲ: ವಿಧಾನ ಪರಿಷತ್ ನ ಎರಡು ಶಿಕ್ಷಕರ ಮತ್ತು ಎರಡು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಎರಡು ಸ್ಥಾನಗಳೊಂದಿಗೆ ಸಮಬಲ ಸಾಧಿಸಿದೆ.
ಪಶ್ಚಿಮ ಶಿಕ್ಷಕರ ಕ್ಷೆತ್ರದಲ್ಲಿ ಬಿಜೆಪಿಯ ಬಸವರಾಜ ಹೊರಟ್ಟಿ ಅವರು ಸತತ ಎಂಟನೇ ಬಾರಿ ಗೆಲುವಿನ ದಾಖಲೆ ಬರೆದಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಕಾಶ ಹುಕ್ಕೇರಿ ಅವರು 11,460 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದು ಬಿಜೆಪಿಯ ಅರುಣ ಶಹಾಪೂರ ವಿರುದ್ಧ ಗೆಲುವು ಸಾಧಿಸಿದ್ದಾರೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹನುಮಂತ ನಿರಾಣಿ ಗೆಲುವು ಸಾಧಿಸಿದ್ದಾರೆ.