Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಜಕೀಯ ಪಕ್ಷಗಳ ಪ್ರತಿನಿಧಿ ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ಕಾರದ ಹೊಸ ಯೋಜನೆ/ಕಾರ್ಯಕ್ರಮಗಳನ್ನು ಘೋಷಿಸುವಂತಿಲ್ಲ. ಪ್ರಚಾರ ಕೂಡ ಕೋವಿಡ್ ಮಾರ್ಗಸೂಚಿ ಪ್ರಕಾರ ನಡೆಸಬೇಕಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗಮಾರ್ಗಸೂಚಿ ಪ್ರಕಟಿಸಲಿದೆ. ಚುನಾವಣಾ ಪ್ರಚಾರ ಸಭೆ, ವಾಹನ ಬಳಕೆ ಸೇರಿದಂತೆ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು.ಧಾರ್ಮಿಕ ಕೇಂದ್ರಗಳಲ್ಲಿ ಯಾವುದೇ ರೀತಿಯ ಪ್ರಚಾರ ಸಭೆಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದರು.
Related Articles
Advertisement
ಮತಗಟ್ಟೆಗಳ ಕರಡು ಪಟ್ಟಿ ಪ್ರಕಟ: ಈಗಾಗಲೇ ಜಿಲ್ಲೆಯ ಮತಗಟ್ಟೆಗಳ ಕರಡು ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ನಾಲ್ಕು ಉಪ ಮತಗಟ್ಟೆಗಳು ಸೇರಿದಂತೆ ಒಟ್ಟು 82 ಮತಗಟ್ಟೆಗಳನ್ನು ಗುರುತಿಸಲಾಗಿರುತ್ತದೆ ಎಂದು ಜಿಲ್ಲಾ ಧಿಕಾರಿ ನಿತೇಶ ತಿಳಿಸಿದರು. ಜಿಲ್ಲೆಯಲ್ಲಿ ದಿನಾಂಕ 9-5-2022 ರಂತೆ ಪದವೀಧರ ಕ್ಷೇತ್ರದಲ್ಲಿ ಒಟ್ಟು 43,798 ಮತದಾರರು ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 13,572 ಮತದಾರರಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕಕ್ಕಿಂತ ಹತ್ತು ದಿನಗಳ ಮುಂಚೆಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಸ್ವೀಕರಿಸಲು ಅವಕಾಶವಿರುತ್ತದೆ ಎಂದು ಜಿಲ್ಲಾ ಧಿಕಾರಿ ವಿವರಿಸಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿ ಧಿಗಳಾದ ಅಭಯ್ ಅವಲಕ್ಕಿ, ರಾಜು ಕೋಪರಿ, ವಿ.ಬಿ.ರೇವಡಿ, ಕೆ.ಜಿ.ಪಾಟೀಲ ಸೇರಿದಂತೆ ಇತರರು ಇದ್ದರು.