Advertisement

ಪರಿಷತ್ ಚುನಾವಣೆ: ‘ಕೈ’ನಿಂದ ಸಿಗದ ಬೆಂಬಲ, ಸ್ಪರ್ಧೆಯಿಂದ ಹಿಂದೆ ಸರಿದ ಪಕ್ಷೇತರ ಅಭ್ಯರ್ಥಿ

09:52 AM Feb 16, 2020 | Mithun PG |

ಬೆಂಗಳೂರು: ಕಾಂಗ್ರೆಸ್‌ನಿಂದ ಪೂರ್ಣಪ್ರಮಾಣದ ಬೆಂಬಲ ಸಿಗದ ಕಾರಣ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅನಿಲ್ ಕುಮಾರ್ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.ಇದರಿಂದ ಉಪಮುಖ್ಯಮಂತ್ರಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವು ಅನಾಯಸವಾಗಿದೆ.

Advertisement

ಫೆ. 17ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮೇಲ್ಮನೆ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಉಪಚುನಾವಣೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರಿಂದ ಈ ಸ್ಥಾನಕ್ಕೆ ಚುನಾವಣೆ ಎದುರಾಗಿದೆ.

ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಬೆಂಬಲದಿಂದ ಪಕ್ಷೇತರ ಅಭ್ಯರ್ಥಿಯಾಗಿ ಅನಿಲ್ ಕುಮಾರ್ ಅವರನ್ನು ಕಣಕ್ಕೆ ಇಳಿಸಿದ್ದರು.

ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜೊತೆ ಚರ್ಚಿಸದೇ ಅನಿಲ್ ಕುಮಾರ್ ಅವರನ್ನು ಶಿವಕುಮಾರ್ ಕಣಕ್ಕಿಳಿಸಿದ್ದು ಈ ಇಬ್ಬರ ಕಣ್ಣು ಕೆಂಪಾಗುವಂತೆ ಮಾಡಿತ್ತು. ಹೀಗಾಗಿ ಡಿ.ಕೆ.ಶಿವಕುಮಾರ್ ಏಕಪಕ್ಷೀಯ ನಿರ್ಧಾರದಿಂದ ಬೇಸರಗೊಂಡ ಈ ಇಬ್ಬರು ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸದಿರಲು ನಿರ್ಧರಿಸಿದ್ದರು. ಹೀಗಾಗಿ ಪೂರ್ಣಪ್ರಮಾಣದ ಬೆಂಬಲ ದೊರೆಯದ ಕಾರಣ ಅನಿಲ್ ಕುಮಾರ್ ಶನಿವಾರ ವಿಧಾನಸಭೆ ಕಾರ್ಯದರ್ಶಿ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರನ್ನು ಭೇಟಿ ಮಾಡಿ ಚುನಾವಣಾ ನಿವೃತ್ತಿ ಘೋಷಿಸಿ ಪತ್ರ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next