Advertisement

ಪರಿಷತ್ ಚುನಾವಣೆ: ಜೂನ್ 13 ರಂದು ವಿಶೇಷ ಸಾಂದರ್ಭಿಕ ರಜೆ

03:48 PM Jun 10, 2022 | Team Udayavani |

ಬೆಂಗಳೂರು: ಜೂನ್ 13 ರಂದು ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳಲ್ಲಿ ದ್ವೈವಾರ್ಷಿಕ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಅರ್ಹ ಮತದಾರರಿಗೆ ಸೀಮಿತವಾದಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಅಧಿಸೂಚನೆ ಹೊರಡಿಸಿದೆ.

Advertisement

ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು , ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು , ಎಲ್ಲಾ ಶೈಕ್ಷಣಿಕ ಸಂಸ್ಥೆಗಳು , ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು , ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು , ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು , ಉಳಿದ ಕೈಗಾರಿಕ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ , ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ , ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸ್ಥಾಪಿತ ಸಂಸ್ಥೆ ಗಳಲ್ಲಿ ಖಾಯಂ ಆಗಿ, ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂನ್ 13, ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next