Advertisement

ಪರಿಷತ್‌ ಚುನಾವಣೆ: 3 ಸ್ಥಾನಕ್ಕೆ 16 ಮಂದಿ ಸ್ಪರ್ಧೆ

06:30 AM May 22, 2018 | Team Udayavani |

ಮೈಸೂರು: ನೈಋತ್ಯ ಪದವೀಧರರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಸೋಮವಾರ 13 ಮಂದಿ, ಚುನಾವಣಾಧಿಕಾರಿಗಳಾದ ಮೈಸೂರು ಪ್ರಾದೇಶಿಕ ಆಯುಕ್ತೆ ಪಿ.ಹೇಮಲತಾ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

Advertisement

ಈ ಪೈಕಿ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಅತಿ ಹೆಚ್ಚಿನ 8 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕಡೆಯ ದಿನವಾಗಿರುವುದರಿಂದ ಹೆಚ್ಚಿನ ಸ್ಪರ್ಧಾಕಾಂಕ್ಷಿಗಳು ಸೋಮವಾರವೇ ನಾಮಪತ್ರ ಸಲ್ಲಿಸಿದರು.

ನೈಋತ್ಯ ಶಿಕ್ಷಕರ ಕ್ಷೇತ್ರದ ಹಾಲಿ ಸದಸ್ಯ ಬಿಜೆಪಿಯ ಕ್ಯಾ.ಗಣೇಶ್‌ ಕಾರ್ಣಿಕ್‌, ಕಾಂಗ್ರೆಸ್‌ ಅಭ್ಯರ್ಥಿ ಮಡಿಕೇರಿಯ ಮಂಜುನಾಥ ಕುಮಾರ್‌, ಜೆಡಿಎಸ್‌ ಅಭ್ಯರ್ಥಿ ಚಿಕ್ಕಮಗಳೂರಿನ ಎಸ್‌.ಎಲ್‌.ಭೋಜೇಗೌಡ, ಪಕ್ಷೇತರ ಅಭ್ಯರ್ಥಿಗಳಾದ ಮಂಗಳೂರಿನ ಡಾ.ಕೆ.ಶಿವಶರಣ್‌, ರಾಜೇಂದ್ರ ಕುಮಾರ್‌ ಕೆ.ಪಿ., ತೀರ್ಥಹಳ್ಳಿ ತಾಲೂಕು ಕೋಣಂದೂರು ಗ್ರಾಮದ ಅರುಣ್‌ ಎಚ್‌.ಟಿ., ಕೊಡಗು ಜಿಲ್ಲೆ ಶನಿವಾರ ಸಂತೆಯ ದೇವರಾಜ ಎಚ್‌.ಎನ್‌., ಕುಂದಾಪುರ ತಾಲೂಕಿನ ನಿತ್ಯಾನಂದ ಶೆಟ್ಟಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಜೆಡಿಎಸ್‌ನ ಮರಿತಿಬ್ಬೇಗೌಡ ಈಗಾಗಲೇ ನಾಮಪತ್ರ ಸಲ್ಲಿಸಿದ್ದು, ಸೋಮವಾರ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ನಿರಂಜನಮೂರ್ತಿ ನಾಮಪತ್ರ ಸಲ್ಲಿಸಿದರು.

ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್‌, ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಪಿ.ದಿನೇಶ್‌, ಪಕ್ಷೇತರ ಅಭ್ಯರ್ಥಿಯಾಗಿ ಭದ್ರಾವತಿಯ ಬಿ.ಕೆ.ಮಂಜುನಾಥನ್‌ ನಾಮಪತ್ರ ಸಲ್ಲಿಸಿದರು.

Advertisement

ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ನಿರಂಜಮೂರ್ತಿ, ಮೇ 17ರಂದೇ ನಾಮಪತ್ರ ಸಲ್ಲಿಸಿದ್ದರಾದರೂ ಸೋಮವಾರ ಪಕ್ಷದ ರಾಜ್ಯ ನಾಯಕರಾದ ಕೆ.ಎಸ್‌.ಈಶ್ವರಪ್ಪ ಸಮ್ಮುಖದಲ್ಲಿ ಮತ್ತೂಮ್ಮೆ ಉಮೇದುವಾರಿಕೆ ಸಲ್ಲಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ ನಾಮಪತ್ರ ಸಲ್ಲಿಕೆ ವೇಳೆ ಸಂಸದ ಆರ್‌.ಧ್ರುವನಾರಾಯಣ, ಮಾಜಿ ಸಂಸದ ಸಿ.ಎಚ್‌.ವಿಜಯಶಂಕರ್‌, ಮಾಜಿ ಶಾಸಕ ವಾಸು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌ ಹಾಜರಿದ್ದರು.

ನೈಋತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಗಣೇಶ್‌ ಕಾರ್ಣಿಕ್‌ ನಾಮಪತ್ರ ಸಲ್ಲಿಕೆ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ಉಸ್ತುವಾರಿ ಮೋನಪ್ಪ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಹ ಪ್ರಭಾರಿ ಪ್ರತಾಪ್‌ ಸಿಂಹ ನಾಯಕ್‌ ಹಾಜರಿದ್ದರು. ನೈಋತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್‌ ನಾಮಪತ್ರ ಸಲ್ಲಿಕೆ ವೇಳೆ ಕೆ.ಎಸ್‌.ಈಶ್ವರಪ್ಪ ಹಾಜರಿದ್ದರು.

23 ರಂದು ನಾಮಪತ್ರಗಳ ಪರಿಶೀಲನೆ, 25 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ, ಜೂನ್‌ 8ರಂದು ಬೆಳಗ್ಗೆ 8ರಿಂದ ಸಂಜೆ 4ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.12ರಂದು ಮತಗಳ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿ  ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next