Advertisement

ವಿಧಾನ ಪರಿಷತ್ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

02:20 PM Nov 13, 2021 | Team Udayavani |

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳ ಚುನಾವಣೆಗೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಒಟ್ಟು 98,846 ಮತದಾರರನ್ನು ಗುರುತಿಸಲಾಗಿದೆ.

Advertisement

ಕರಡು ಮತದಾರರ ಪಟ್ಟಿಯಲ್ಲಿ 47, 368 ಪುರುಷ, 51,474 ಮಹಿಳಾ ಮತದಾರರು ಮತ್ತು ಮೂವರು ತೃತೀಯ ಲಿಂಗಿ ಮತದಾರರು ಸೇರಿ ಒಟ್ಟ 98, 846 ಮತದಾರರು ಇದ್ದಾರೆ. ಇದಕ್ಕಾಗಿ 6,073 ಮತಗಟ್ಟೆಗಳನ್ನು ಸ್ಥಾಪಿಸಲು‌ ಉದ್ದೇಶಿಸಲಾಗಿದೆ.

ಇದನ್ನೂ ಓದಿ:ಕಾಂಗ್ರೆಸ್ ಖಾಲಿ ಡಬ್ಬದ ಹಾಗೆ ಶಬ್ಧ ಮಾಡುತ್ತಿದೆ: ಕೆ.ಎಸ್.ಈಶ್ವರಪ್ಪ

ಜಿಲ್ಲಾ ಚುನಾವಣಾ ಅಧಿಕಾರಿ, ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರಡು‌ ಮತದಾರರ ಪಟ್ಟಿ ಲಭ್ಯವಿದೆ. ಈ ಕರಡು ಮತದಾರರ ಪಟ್ಟಿ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಏಳು ದಿನಗಳಲ್ಲಿ ಸಂಬಂಧಪಟ್ಟ ಚುನಾವಣಾ ನೋಂದಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ರಾಜ್ಯ‌ ಮುಖ್ಯ ಚುನಾವಣಾಧಿಕಾರಿ‌ ಮನೋಜ್ ಕುಮಾರ್ ಮೀನಾ ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next