Advertisement

ಪ್ರಭಾರಿ ಪ್ರಾಂಶುಪಾಲರ ಹುದ್ದೆಗೆ ಕೌನ್ಸೆಲಿಂಗ್‌

07:30 AM Oct 01, 2017 | Harsha Rao |

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗೆ ಸೇವಾ ಜೇಷ್ಠತೆ ಆಧಾರದಲ್ಲಿ ಕೌನ್ಸೆಲಿಂಗ್‌ ಮೂಲಕ ಪ್ರಭಾರ ಪ್ರಾಂಶುಪಾಲರ ನೇಮಕಕ್ಕೆ  ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ.

Advertisement

ಇದಕ್ಕೆ ಸಂಬಂಧಿಸಿದ ಕೌನ್ಸೆಲಿಂಗ್‌ ಅ. 9ರ  ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸರಕಾರಿ ವಿಜ್ಞಾನ ಕಾಲೇಜಿನಲ್ಲಿ ನಡೆಯಲಿದೆ. ಸೇವಾ ಹಿರಿತನ ಹೊಂದಿರುವ ಕಾಲೇಜಿನ ಸಹ ಪ್ರಾಧ್ಯಾಪಕರು ಕೌನ್ಸೆಲಿಂಗ್‌ನಲ್ಲಿ ಭಾಗವಹಿಸುವಂತೆ ಇಲಾಖೆ ಸೂಚಿಸಿದೆ.
ಖಾಯಂ ಪ್ರಾಂಶುಪಾಲರು ಹಾಗೂ ಕೌನ್ಸೆಲಿಂಗ್‌ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವ ಪ್ರಭಾರಿ ಪ್ರಾಂಶುಪಾಲರನ್ನು ಹೊರತುಪಡಿಸಿ, ಉಳಿದ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗೆ ಸೇವಾ ಜೇಷ್ಠತೆಯಲ್ಲಿ ಹಿರಿಯರಾದ ಸಹ ಪ್ರಾಧ್ಯಾಪಕರನ್ನು ಪ್ರಭಾರಿ ಪ್ರಾಂಶುಪಾಲರನ್ನಾಗಿ ನೇಮಿಸಲಾಗುತ್ತದೆ.

ರಾಜ್ಯದ ಸುಮಾರು 200ಕ್ಕೂ ಅಧಿಕ ಪದವಿ ಕಾಲೇಜಿನಲ್ಲಿ ಖಾಯಂ ಪ್ರಾಂಶುಪಾಲರೇ ಇಲ್ಲ. ಪ್ರಭಾರಿ ಪ್ರಾಂಶುಪಾಲರ ಮೂಲಕವೇ ಕಾಲೇಜಿನ ಆಡಳಿತಾತ್ಮಕ ಕಾರ್ಯಭಾರ ನಡೆಸಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next