Advertisement
ಪ್ರಾಂಶುಪಾಲನ ಕಿರುಕುಳ ಸಂಬಂಧ ಮಕ್ಕಳ ಸಹಾಯವಾಣಿಗೆ ಬಂದ ಕರೆ ಆಧರಿಸಿ ಪ್ರಾಥಮಿಕ ತನಿಖೆ ನಡೆಸಿದ ಸಹಾಯವಾಣಿ ಅಧಿಕಾರಿಗಳು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಆರೋಪಿ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದರು. ಕುಮಾರ್ ಠಾಕೂರ್ ಕಳೆದ ಮೂರು ವರ್ಷದಿಂದ ಸದಾಶಿವ ನಗರ ಠಾಣಾ ವ್ಯಾಪ್ತಿಯ ಕೇಂದ್ರ ಸರ್ಕಾರಿ ಶಾಲೆಯಲ್ಲಿ ಪ್ರಾಂಶುಪಾಲರಾಗಿದ್ದರು. ಓದಿನಲ್ಲಿ ಹಿಂದಿರುವ ವಿದ್ಯಾರ್ಥಿಗಳಿಗೆ 2016ರ ಡಿ.23 ರಿಂದ ಜ.2ರವರೆಗೆ ವಿಶೇಷ ಸ್ಟಡಿ ಕ್ಯಾಂಪ್ ಆಯೋಜಿಸಲಾಗಿತ್ತು.
Related Articles
Advertisement
ಶಾಲೆಗೆ ಉಗ್ರಪ್ಪ ಭೇಟಿ: ಮಾಹಿತಿ ಸಂಗ್ರಹಬೆಂಗಳೂರು: ಪ್ರಾಂಶುಪಾಲರಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ಅರೋಪ ಕೇಳಿಬಂದಿರುವ ಸದಾಶಿವನಗರದ ಕೇಂದ್ರೀಯ ವಿದ್ಯಾಲಯಕ್ಕೆ ಲೈಂಗಿಕ
ಕಿರುಕುಳ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಶುಕ್ರವಾರ ಭೇಟಿ ನೀಡಿ ಮಾಹಿತಿ ಪಡೆದರು. ಈ ವೇಳೆ ಶಾಲೆಯು, ಲೈಂಗಿಕ ದೌರ್ಜನ್ಯ ತಡೆ ಸಂಬಂಧ ವಿಶಾಖ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳನ್ನು ಅನುಸರಿಸದಿರುವುದು ಕಂಡುಬಂದಿದೆ. ಇದರಿಂದ ಶಾಲಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಉಗ್ರಪ್ಪ ಅವರು, ವಿಶೇಷ ತರಗತಿ ನೆಪದಲ್ಲಿ ವಿದ್ಯಾರ್ಥಿಗಳನ್ನು ಶಾಲೆಯಲ್ಲೇ ಉಳಿಸಿಕೊಂಡಾಗ ಅವರ ಸುರಕ್ಷತೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಯಾವ ಕಾರಣಕ್ಕಾಗಿ ಶಾಲೆ ಬಳಿಕ ವಿದ್ಯಾರ್ಥಿನಿಯರನ್ನು ಶಾಲೆಯಲ್ಲಿ ಉಳಿಸಿಕೊಳ್ಳಲಾ ಗುತ್ತಿತ್ತು ಮತ್ತು ರಾತ್ರಿ ವೇಳೆಯೇ ಏಕೆ ವಿಶೇಷ ತರಗತಿ ನಡೆಸುತ್ತಿದ್ದಿರಿ ಎಂಬ ಬಗ್ಗೆ ಉತ್ತರಿಸುವಂತೆ ಸೂಚಿಸಿದರು.