Advertisement
ಬಿಜೆಪಿ ಮುಖಂಡ ಮಂಜುನಾಥ ಕುನ್ನೂರ ಕಾಂಗ್ರೆಸ್ ಸೇರ್ಪಡೆಬೆಂಗಳೂರು: ಮುಖ್ಯಮಂತ್ರಿ ಆಪ್ತ ಹಾಗೂ ಅವರ ತವರು ಕ್ಷೇತ್ರದ ಬಿಜೆಪಿ ನಾಯಕ ಮಂಜುನಾಥ್ ಕುನ್ನೂರ ಸೋಮವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
Related Articles
Advertisement
ಇದೇ ಸಂದರ್ಭದಲ್ಲಿ ಚಿಂತಾಮಣಿಯ ಹಲವು ಮುಖಂಡರು ಮತ್ತು ಬೆಂಬಲಿಗರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
2ಎ ಮೀಸಲಾತಿಗಾಗಿ ಹೋರಾಟ ಮಾಡಿದ್ದೆವು. ಆದರೆ, ಅದನ್ನು ಮುಸ್ಲಿಂರಿಂದ ಕಸಿದು ನಮಗೆ ನೀಡಲು ಹೊರಟಿದ್ದಾರೆ. ಈ ಕಾರಣಕ್ಕಾಗಿ ಬಿಜೆಪಿ ತೊರೆದಿದ್ದೇನೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಉತ್ತಮರು ಹಾಗೂ ಕಾಂಗ್ರೆಸ್ ಮುಕ್ತ ರಾಷ್ಟ್ರ ನಿರ್ಮಾಣ ಅಂತಾರೆ. ಆದರೆ, ಅವರಿಬ್ಬರೂ ದುಷ್ಟರು. ಬಿಜೆಪಿ ನಿರ್ನಾಮ ಮಾಡುತ್ತೇವೆ.-ಮಂಜುನಾಥ್ ಕುನ್ನೂರ 30 ರಂದು ಗುಬ್ಬಿ ಶ್ರೀನಿವಾಸ್ ಕೈ ತೆಕ್ಕೆಗೆ
ಬೆಂಗಳೂರು: ಗುಬ್ಬಿ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್‌ನಿಂದ ಆಯ್ಕೆಯಾಗಿದ್ದ ಎಸ್.ಆರ್.ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ. ಸೋಮವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಮಾ.30 ರಂದು ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ಅವರು, ಅನಿವಾರ್ಯವಾಗಿ ಜೆಡಿಎಸ್ ತೊರೆಯಬೇಕಾಗಿದೆ. ನಾನು ಮತ್ತು ಎಚ್.ಡಿ.ಕುಮಾರಸ್ವಾಮಿ ಸಹೋದರರಂತೆ ಇದ್ದೆವು. ಆದರೆ, ಕೆಲವರ ಮಾತು ಹೇಳಿ ನನ್ನನ್ನು ಪಕ್ಷದಿಂದ ಹೊರ ಹಾಕಿದರು ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯಸಭೆ ಚುನಾವಣೆ ವೇಳೆ ನಾನು ಪಕ್ಷ ದ್ರೋಹ ಮಾಡಿರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರು ಸ್ಪರ್ಧೆ ಮಾಡಿದಾಗಲೂ ಪಕ್ಷಕ್ಕೆ ವಿರುದ್ಧವಾಗಿ ನಡೆದುಕೊಳ್ಳಲಿಲ್ಲ. ಆದರೂ ನನ್ನನ್ನು ಅವಮಾನಿಸಲಾಯಿತು. 2021 ರಲ್ಲೇ ನನ್ನ ಕ್ಷೇತ್ರಕ್ಕೆ ಬದಲಿ ಅಭ್ಯರ್ಥಿ ಘೋಷಿಸಲಾಯಿತು. ಹೀಗಾಗಿ, ನಾನು ಬೇರೆ ದಾರಿ ನೋಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ಹೇಮಚಂದ್ರ ಸಾಗರ್ ಬಿಜೆಪಿಗೆ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಸೋಮವಾರ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಹೇಮಚಂದ್ರ ಸಾಗರ್ ಅವರು ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿಜೆಪಿ ಹಲವು ಮುಖಂಡರು ಉಪಸ್ಥಿತರಿದ್ದರು.