ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಬೃಹತ್ ಸಮಾವೇಶಕ್ಕೆ ಕ್ಷಣಗಣನೆ ಶುರುವಾಗಿದೆ.
Advertisement
ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಈಗಾಗಲೇ ಜಗದ್ಗುರು ಜಯದೇವ ಕ್ರೀಡಾಂಗಣ ಭರ್ತಿಯಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಸಮಾವೇಶ ಶಕ್ತಿ ತುಂಬಲಿದೆ ಎನ್ನುವ ವಿಶ್ವಾಸ ನಾಯಕರಲ್ಲಿ ಮನೆ ಮಾಡಿದೆ.