ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಪದಗ್ರಹಣ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ನಡೆದಿದೆ.
ಬೆಂಗಳೂರಿನ ಕಂಠೀರವ ಮೈದಾನದಲ್ಲಿ ಸೇರಿರುವ ಅಪಾರ ಜನಸಾಗರದ ನಡುವೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಎಂಟು ಮಂದಿ ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ವಾದ್ರಾ, ರಾಹುಲ್ ಗಾಂಧಿ ಆಗಮಿಸಿದ್ದಾರೆ. ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಬಿಹಾರ ಸಿಎಂ ನಿತೀಶ್ ಕುಮಾರ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಆಗಮಿಸಿದ್ದಾರೆ.
ನಟರಾದ ಕಮಲ್ ಹಾಸನ್, ಶಿವರಾಜ್ ಕುಮಾರ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ದುನಿಯಾ ವಿಜಯ್, ನಿಶ್ವಿಕಾ ನಾಯ್ಡು ಮುಂತಾದವರು ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ.
Related Articles
ಸಚಿವರಾಗಿ ಡಾ.ಜಿ ಪರಮೇಶ್ವರ್, ಎಂ.ಬಿ ಪಾಟೀಲ್, ಕೆ.ಜೆ ಜಾರ್ಜ್, ಕೆ.ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಪ್ರಿಯಾಂಕಾ ಖರ್ಗೆ, ಜಮೀರ್ ಅಹ್ಮದ್ ಖಾನ್ ಅವರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ