Advertisement

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

12:44 AM Dec 19, 2024 | Team Udayavani |

ಬೆಳಗಾವಿ: ನಕಲಿ ಚಿನ್ನಾಭರಣ ಗಿರವಿ ಇಟ್ಟು ವಂಚಿಸಿ ಸಾಲ ಪಡೆದು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕುಗಳಲ್ಲಿ ಚಿನ್ನಾಭರಣದ ಸಾಲ ನೀಡುವಾಗ ಬಹಳ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ತಿಳಿಸಿದ್ದಾರೆ.

Advertisement

ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ಸುಜಾ ಕುಶಾಲಪ್ಪ, ಕೊಡಗಿನಲ್ಲಿ ಕೆಡಿಡಿಸಿ ಬ್ಯಾಂಕಿನಲ್ಲಿ ನಕಲಿ ಚಿನ್ನ ಇಟ್ಟು ವಂಚಿಸಿದ ಪ್ರಕರಣವನ್ನು ತಿಳಿಸಿದರು.

ಇದಕ್ಕೆ ಉತ್ತರಿಸಿದ ಕೆ.ಎನ್‌. ರಾಜಣ್ಣ, ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕುಗಳಲ್ಲೂ ಚಿನ್ನಾಭರಣವಿಡುವಾಗ ಅಸಲಿಯತ್ತನ್ನು ಪರೀಕ್ಷಿಸಬೇಕು ಎಂದು ಸೂಚಿಸಲಾಗಿದೆ.

ಇಂಥಹ ವಂಚಕರಿಂದ ಸಾಲ ವಸೂಲಾತಿಯ ಜತೆಗೆ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸೂಚಿಸಿರುವುದಾಗಿ ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next