ಹಾಸನ: ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯವು ಮೇ 23 ರಂದು ಹಾಸನ ನಗರದ ಸರ್ಕಾರಿ ಎಂಜಿನಿಯ ರಿಂಗ್ ಕಾಲೇಜ್‌ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ 23ರ ಬೆಳಗ್ಗೆ 6 ಗಂಟೆ ಯಿಂದ 24 ರ ಮಧ್ಯರಾತ್ರಿ 12 ಗಂಟೆಯವರೆಗೆ 2 ದಿನ ಗಳು ಮುಂಜಾಗ್ರತೆಗಾಗಿ ಡೀಸಿ ಹಾಗೂ ಜಿಲ್ಲಾ ದಂಡಾ ಧಿಕಾರಿಗಳಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ವಿಜಯೋತ್ಸವ ಮತ್ತು ಕರಾಳ ದಿನಾ ಚರಣೆ ನಡೆಸುವುದು ನಿಷೇಧಿಸಿದೆ. ಯಾವುದೇ ಸ್ಫೋಟಕಗಳನ್ನು ಕೊಂಡೊ ಯ್ಯುವುದು, ವಿಜಯೋತ್ಸವದ ನೆಪದಲ್ಲಿ ಹೂ ಬಾಣಗಳು ಪಟಾಕಿ ಸಿಡಿಸುವುದು, ಸಾರ್ವಜನಿಕರಿಗೆ ಭೌತಿಕ ವಾಗಿ ಹಿಂಸೆ ಯನ್ನು ಉಂಟು ಮಾಡಲು ಬಳಸಬಹು ದಾದಂತಹ ಅಪಾಯಕಾರಿ ಆಯುಧ ಗಳನ್ನು ಒಯ್ಯುವುದು ನಿಷೇಧಿಸಿದೆ.
ಬಂದ್, ಪ್ರತಿಭಟನೆ ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ ಹಾಗೂ ಪೂರಕ ಚಟುವಟಿಕೆ ಗಳನ್ನು ನಿಷೇಧಿಸಿದೆ. ಯಾವುದೇ ಖಾಸಗಿ, ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸುವ ಮತ್ತು ರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆ ಗಳನ್ನು ನಿಷೇಧಿಸಿದೆ.
ಯಾವುದೇ ವ್ಯಕ್ತಿಯ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟು ಮಾಡ ಬಹುದಾದಂತಹ ಚಟು ವಟಿಕೆಗಳನ್ನು ನಿಷೇಧಿಸಿದೆ. ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿಂದಿಸುವಂತಹ, ಅವಹೇಳನ ಕಾರಿಯಾದ ಯಾವುದೇ ಘೋಷಣೆಗಳು, ಭಾಷಣ ಪ್ರಕಟಣೆಗಳು ಅವಾಚ್ಯ ಶಬ್ದಗಳ ಬಳಕೆ, ಆವೇಶಕಾರಿ, ಪ್ರಚೋ ದನಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆ ಗಳನ್ನು ನಿಷೇಧಿಸಲಾಗಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಚುನಾವಣೆ ಕರ್ತವ್ಯ ನಿರತ ಅಧಿಕಾರಿ, ಸಿಬ್ಬಂದಿ, ಚುನಾವಣಾ ಅಭ್ಯರ್ಥಿ, ಏಜೆಂಟ್, ಮಾಧ್ಯಮದ ವರನ್ನು ಒಳಗೊಂಡಂತೆ ಪೂರ್ವಾನುಮತಿ ಪಡೆದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ.
ಈ ನಿಷೇಧಾಜ್ಞೆಯು ಶವ ಯಾತ್ರೆ ಹಾಗೂ ಪೂರ್ವಾನುಮತಿ ಪಡೆದ ಧಾರ್ಮಿಕ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಸ್ಪಷ್ಟಪಡಿಸಿದ್ದಾರೆ.