Advertisement

ಉಪಕದನ: ಬೆಳಗಾವಿಯಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

08:35 AM May 02, 2021 | Team Udayavani |

ಬೆಳಗಾವಿ:  ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭಾನುವಾರ ಬೆಳಿಗ್ಗೆ ಕೋವಿಡ್ ಮಾರ್ಗಸೂಚಿಯಂತೆ ಬಿಗಿ ಭದ್ರತೆಯಲ್ಲಿ  ಆರಂಭವಾಯಿತು.

Advertisement

ನಗರದ ಅರ್ ಪಿ ಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಇವಿಎಂ ಯಂತ್ರಗಳನ್ನು ಮತ  ಎಣಿಕೆ ಕೊಠಡಿಗೆ ಕೊಂಡೊಯ್ಯಲಾಯಿತು.

ಲೋಕಸಭಾ ಉಪ ಚುನಾವಣಾ ಸಾಮಾನ್ಯ ವೀಕ್ಷಕರಾದ ಡಾ.ಚಂದ್ರಭೂಷಣ್ ತ್ರಿಪಾಠಿ, ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next