Advertisement

ಸರ್ಕಾರದ ನೀತಿಯಿಂದ ದೇಶ ದಿವಾಳಿ: ಪಾಷಾ

02:22 PM Mar 29, 2022 | Niyatha Bhat |

ಜಗಳೂರು: ದೇಶ ಆರ್ಥಿಕವಾಗಿ ದಿವಾಳಿಯಾಗುತ್ತಿದೆ. ಕೇಂದ್ರ ಸರ್ಕಾರ ಆರ್ಥಿಕ ನೀತಿಗಳು ಕಾರ್ಪೋರೆಟ್‌ ಪರವಾಗಿರುವುದು ಇದಕ್ಕೆ ಕಾರಣ ಎಂದು ತಾಲೂಕು ಜೆಸಿಟಿಯು ಅಧ್ಯಕ್ಷ ಮೊಹಮದ್‌ ಪಾಷಾ ಆರೋಪಿಸಿದರು. ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರೊಂದಿಗೆ ಪಟ್ಟಣದಲ್ಲಿ ‘ಭಾರತ ಉಳಿಸಿ ಜನರನ್ನು ರಕ್ಷಿಸಿ’ ಪ್ರತಿಭಟನಾ ಜಾಥ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

Advertisement

ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಎಲ್ಲಾ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಂಬಲ ಬೆಲೆ ಖಾತ್ರಿ ಮಾಡಬೇಕು. ವಿದ್ಯುತ್‌ ಮಸೂದೆಯನ್ನು ಹಿಂಪಡೆಯಬೇಕು. ಆದಾಯ ತೆರಿಗೆ ಪಾವತಿಸದ ಕುಟುಂಬಗಳಿಗೆ ತಿಂಗಳಿಗೆ 7,500 ರೂ. ನೀಡಬೇಕು. ನರೇಗಾಗೆ ಹೆಚ್ಚಿನ ನಿಧಿ ನೀಡಿ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆಯೂ ಸೇರಿದಂತೆ ಅನೇಕ ಬೇಡಿಕೆಗಳನ್ನು ಕೇಂದ್ರ ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು.

ಜೆಸಿಟಿಯು ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಗ್ರಾಪಂ ಅಸಂಘಟಿತ ನೌಕರರ ಸಂಘದ ಅಧ್ಯಕ್ಷ ಮಹಾಂತೇಶ್‌, ನೆರಳು ಬೀಡಿ ಕಾರ್ಮಿಕರ ಯೂನಿಯನ್‌, ಕರ್ನಾಟಕ ಶ್ರಮಿಕ ಶಕ್ತಿ, ಬ್ಯಾಂಕ್‌ ನೌಕರರ ಸಂಘ ಮತ್ತು ಎಲ್‌ಐಸಿ ಎಂಪ್ಲಾಯಿಸ್‌ ಯೂನಿಯ್‌ನ ಕಾರ್ಮಿಕರು ಮತ್ತು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

Advertisement

Udayavani is now on Telegram. Click here to join our channel and stay updated with the latest news.

Next