Advertisement

ಜನಸಂಖ್ಯೆ ನಿಯಂತ್ರಣದಿಂದ ದೇಶ ಅಭಿವೃದ್ಧಿ

11:14 AM Jul 12, 2019 | Suhan S |

ಚಾಮರಾಜನಗರ: ಏರುತ್ತಿರುವ ಜನಸಂಖ್ಯೆ ನಿಯಂತ್ರಣದಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯಪಟ್ಟರು.

Advertisement

ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜನಸಂಖ್ಯೆ ದಿನಾಚ ರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನಸಂಖ್ಯೆ ಹೆಚ್ಚಳ ಅನೇಕ ಸಮಸ್ಯೆ: ವಿಶ್ವದಲ್ಲಿ ಚೀನಾ ನಂತರ ಭಾರತ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ. ಜನಸಂಖ್ಯೆ ಹೆಚ್ಚಳ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಜನಸಂಖ್ಯೆ ಹೆಚ್ಚಳದಿಂದ ಹಲವಾರು ಸಮಸ್ಯೆಗಳನ್ನು ನಮ್ಮ ದೇಶ ಎದುರಿಸುತ್ತಿದೆ. ಅನಕ್ಷರತೆ, ಬಡತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳ ಬೇಕಾದರೆ ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳ ಬೇಕಿದೆ ಎಂದರು.

ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಜನಸಂಖ್ಯೆ ತ್ವರಿತವಾಗಿ ಬೆಳೆಯುವಷ್ಟು ಆಹಾರವನ್ನು ಬೆಳೆಸಲು ಸಾಧ್ಯವಿಲ್ಲ. ಜನಸಂಖ್ಯೆ ಮಿತಿಮೀರಿದರೆ ಜನರಿಗೆ ಮೂಲಭೂತ ಸೌಲಭ್ಯ, ಶಿಕ್ಷಣ ಸೇರಿದಂತೆ ಇತರೆ ಅವ ಶ್ಯಕತೆಗಳನ್ನು ಪರಿಪೂರ್ಣವಾಗಿ ಪೂರೈಸಲು ಸಾಧ್ಯ ವಾಗದೆ ಇರಬಹುದು. ಆದ್ದರಿಂದ ಜನರು ಸಹ ಜಾಗೃ ತರಾಗಿ ಕುಟುಂಬ ಕಲ್ಯಾಣ ಯೋಜನೆಗಳನ್ನು ಅಳವ ಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕುಟುಂಬ ಕಲ್ಯಾಣ ಯೋಜನೆ ಕಾರ್ಯಕ್ರಮವನ್ನು ಪರಿಣಾಮ ಕಾರಿ ಯಾಗಿ ಜಾರಿಗೊಳಿಸಬೇಕಾಗುತ್ತದೆ ಎಂದು ತಿಳಿಸಿದರು.

ಜನಸಂಖ್ಯೆ ನಿಯಂತ್ರಣ ಅನಿವಾರ್ಯ: ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ ಮಾತನಾಡಿ, ಜನಸಂಖ್ಯೆ ಸ್ಫೋಟ ಒಂದು ವಿಷವರ್ತುಲವಾಗಿದೆ. ಬಡತನ, ಅನಕ್ಷರತೆ, ಸಂಪನ್ಮೂಲ ಕೊರತೆ, ನಿರುದ್ಯೋಗ ಸಮಸ್ಯೆಗಳು ಜನಸಂಖ್ಯೆಯಿಂದಾಗಿವೆ ಆದ್ದರಿಂದ ದೇಶದ ಅಬಿವೃದ್ಧಿಗೆ ಜನಸಂಖ್ಯೆ ನಿಯಂತ್ರಣ ಅನಿವಾ ರ್ಯ ಎಂದು ಹೇಳಿದರು.

Advertisement

ಅರಿವು ಅತಿಮುಖ್ಯ: ಜನಸಂಖ್ಯೆ ನಿಯಂತ್ರಣದ ಅರಿವು ಅತಿಮುಖ್ಯ. ವಿಶೇಷವಾಗಿ ಮಹಿಳೆಯರು ಈ ಬಗ್ಗೆ ಜಾಗೃತಿ ಹೊಂದಬೇಕಿದೆ. ಚಿಕ್ಕ ವಯಸ್ಸಿನಲ್ಲೆ ಮದುವೆ ಮಾಡುವುದರಿಂದ ವಿದ್ಯಾಭ್ಯಾಸ ಮೊಟಕು ಗೊಳ್ಳುತ್ತದೆ. ಆದ್ದರಿಂದ ಪ್ರಾಪ್ತ ವಯಸ್ಸಿನಲ್ಲಿ ವಿವಾಹ ವಾಗಬೇಕು. ಕುಟುಂಬದಲ್ಲಿ ಸಂತಾನ ನಿಯಂತ್ರಣ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಲತಾ ಕುಮಾರಿ ತಿಳಿಸಿದರು.

ವಿಶೇಷ ಉಪನ್ಯಾಸ: ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಂಗಾರ ನಾಯಕ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಆಸ್ಟ್ರೇಲಿಯಾದಲ್ಲಿರುವ ಒಟ್ಟು ಜನಸಂಖ್ಯೆಯ ಪ್ರಮಾಣದಷ್ಟು ಜನಸಂಖ್ಯೆ ಭಾರತದಲ್ಲಿ ಒಂದು ವರ್ಷಕ್ಕೆ ಹೆಚ್ಚುತ್ತಿದೆ. ಈ ಪ್ರಮಾಣದ ಹೆಚ್ಚಳದಿಂದ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದರು.

ಜನಸಂಖ್ಯೆ ನಿಯಂತ್ರಣದ ಬಗ್ಗೆ ಹೆಚ್ಚಿನ ಅರಿವು ಪಡೆಯಬೇಕು ಕುಟುಂಬ ಯೋಜನೆ ಕ್ರಮಗಳನ್ನು ಅನುಸರಿಸಬೇಕು. ಹಿಂದಿನ ಪೀಳಿಗೆ ಮಾಡಿದ ತಪ್ಪನ್ನು ಇಂದಿನ ಪೀಳಿಗೆ ಮಾಡಬಾರದು ಎಂದು ಸಲಹೆ ನೀಡಿದರು.

ಹೆಚ್ಚುವರಿ ಪೊಲೀಸ್‌ ಅಧೀಕ್ಷಕಿ ಅನಿತಾ ಹದ್ದಣ್ಣನವರ್‌, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ, ಆರ್‌.ಸಿ.ಎಚ್. ಅಧಿಕಾರಿ ಡಾ.ಕೆ.ಎಸ್‌.ವಿಶ್ವೇಶ್ವರಯ್ಯ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರಾಜು, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಮಹದೇವ, ಸರ್ವಲೆನ್ಸ್‌ ಅಧಿಕಾರಿ ನಾಗರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next