ನವದೆಹಲಿ; ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 8,084 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜೂನ್ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಡ್ರಗ್ ಪಾರ್ಟಿ: ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಬಂಧನ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 47,995ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 5,24,771 ಮಂದಿ ಸಾವನ್ನಪ್ಪಿದ್ದಾರೆ.
24ಗಂಟೆಯಲ್ಲಿ 3,482 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 4,592 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಒಟ್ಟು 4,26,57,335 ಮಂದಿ ಚೇತರಿಸಿಕೊಂಡಿದ್ದಾರೆ.
ಭಾರತದ ಕೋವಿಡ್ ಚೇತರಿಕೆ ದರ ಶೇ.98.68ರಷ್ಟಿದೆ. ಪ್ರತಿದಿನ ಪಾಸಿಟಿವಿಟಿ ದರ ಶೇ.3.44ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.2.21ರಷ್ಟಿದೆ ಎಂದು ಸಚಿವಾಲಯದ ಅಂಕಿಅಂಶದಲ್ಲಿ ತಿಳಿಸಿದೆ.