Advertisement

ಮೈಸೂರು : ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳನ್ನು ರಕ್ಷಿಸಿದ ಪೊಲೀಸರು!

10:51 PM Jul 09, 2020 | sudhir |

ಮೈಸೂರು : ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳನ್ನು ಪೊಲೀಸರು ರಕ್ಷಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ದುಗ್ಗಹಳ್ಳಿ ಗ್ರಾಮದ ಕಾವ್ಯ ಮತ್ತು ಕುರಿಹುಂಡಿ ಗ್ರಾಮದ ರವಿ ಆಸ್ಪತ್ರೆಗೆ ದಾಖಲಾದ ಪ್ರೇಮಿಗಳು. ಇವರಿಬ್ಬರು ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರಾದರರೂ, ಅಂತರ್ಜಾತಿ ಕಾರಣದಿಂದ ಇವರ ವಿವಾಹಕ್ಕೆ ಎರಡು ಕುಟುಂಬಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ  ದುಗ್ಗ ಹಳ್ಳಿ ಗ್ರಾಮದ ಕಾವ್ಯ ಮನೆಯಲ್ಲಿ ಯಾರು ಇಲ್ಲದ ವೇಳೆ ಆಗಮಿಸಿದ ಪ್ರಿಯತಮ ರವಿ, ಜೊತೆಗೆ ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹುಲ್ಲಹಳ್ಳಿ ಪೊಲೀಸರು, ಘಟನೆ ಬಗ್ಗೆ ಮಾಹಿತಿ ಪಡೆದು, ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರೇಮಿಗಳನ್ನು ರಕ್ಷಿಸಿ, ಅಂಬುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next