Advertisement

ಜಲಪಾತ ವೀಕ್ಷಣೆಗೆ ಹೊರಟಿದ್ದ ದಂಪತಿ ಅಪಘಾತದಲ್ಲಿ ಸಾವು

01:03 PM Sep 14, 2020 | Suhan S |

ಚನ್ನಪಟ್ಟಣ: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ.ಮಧುಸೂದನಾಚಾರ್ಯ ಜೋಷಿ(53), ಪತ್ನಿ ಗಂಗಾಂಬಿಕ(40) ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Advertisement

ಸಾಹಿತಿ:2ಕಾರು ಹಾಗೂ ಬೈಕ್‌ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಜೋಷಿ ಅವರ ಪತ್ನಿ ಗಂಗಾಂಬಿಕ ಸ್ಥಳದಲ್ಲೇ ಮೃತಪಟ್ಟರೆ, ಮಧುಸೂದನಾಚಾರ್ಯ ಜೋಷಿ ಬೆಂಗಳೂರಿನ ಬಿ ಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಿಸದೆ ನಿಧನರಾಗಿದ್ದಾರೆ. ಪುತ್ರಿ ಅನುಷಾಗೆ ಸಣ್ಣ ಪುಟ್ಟ ಗಾಯ ಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಯಾಂಟ್ರೋ ಕಾರಿನಲ್ಲಿ ತಮ್ಮ ಕುಟುಂಬದೊಂದಿಗೆ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆಗೆ ತೆರಳುತ್ತಿದ್ದ ವೇಳೆ ದಾಸನದೊಡ್ಡಿ ಬಳಿ ಎದುರಿನಿಂದ ಬಂದ ಸ್ವಿಫ್ಟ್ ಕಾರು ಮುಖಾಮುಖೀ ಡಿಕ್ಕಿ ಹೊಡೆದಿದೆ. ಇದೇ ವೇಳೆ ಮಳವಳ್ಳಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅವರೂ ಅಪ ಘಾತ ದಲ್ಲಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲತಃ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸಂಕಲ್ಲೂರ ನಿವಾಸಿ ಆಗಿರುವ ಜೋಷಿ, ಚನ್ನ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಆಗಮಿಸಿ ಇಲ್ಲಿಯೇ ನೆಲೆ ಸಿದ್ದರು. ನಿರರ್ಗಳವಾಗಿ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡತನದ ಬಗ್ಗೆ ಅಪಾರ ಪ್ರೀತಿ, ಅಭಿಮಾನ, ಗೌರವ ಹೊಂದಿದ್ದರು. ಮೊದಲ ಕೃತಿ ದಾಸ ಸಾಹಿತ್ಯ ಸಂಭ್ರಮ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮುಖಾಂತರ ಪ್ರಕಟಿಸಲಾಗಿತ್ತು. ಉಡುಪಿಯಲ್ಲಿ ಅಖೀಲ ಭಾರತಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಲೋಕಾರ್ಪಣೆ ಮಾಡಿಸಿದ್ದರು. ಜೋಷಿಯವರ ಬೆಳವಣಿಗೆಗೆ ಬೆನ್ನೆಲುಬಾಗಿದ್ದ  ಗಂಗಾಂಬಿಕ ಅವರು ಆತಿಥ್ಯ ನೀಡಿ ಸತ್ಕರಿಸುವುದರಲ್ಲಿ ಸಿದ್ಧಹಸ್ತರಾಗಿದ್ದರು. ಸಾವಿನಲ್ಲೂ ದಂಪತಿ ಒಂದಾಗಿರುವುದು ದುಃಖ ಮಡುಗಟ್ಟುವಂತೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next