Advertisement

ಸುಮಾರು ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ದಂಪತಿ ನಾಪತ್ತೆ

11:09 PM Aug 06, 2022 | Team Udayavani |

ಪಡುಬಿದ್ರಿ: ಸುಮಾರು ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಶಿಫಾಶೇಖ್‌ (25) ಹಾಗೂ ರಿಯಾಜ್‌ (28) ನಂದಿಕೂರು-ಅಡ್ವೆಯ ಮನೆಯಿಂದ ಉಡುಪಿಗೆ ಮೊಬೈಲ್‌ ಖರೀದಿಸಿ ಬರುವುದಾಗಿ ಹೇಳಿ ಆ. 1ರಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ರಿಯಾಜ್‌ ಮಣಿಪಾಲದ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್‌ ತಂದೆ-ತಾಯಿ ಮದುವೆಗೆ ಮುಂಚೆ ತೀರಿಕೊಂಡಿದ್ದರು. ಆ ವೇಳೆ ಬಿಎಎಂಎಸ್‌ ಕಡೆಯ ವರ್ಷದಲ್ಲಿ ಕಲಿಯುತ್ತಿದ್ದ ಈಕೆಯು ವಿದ್ಯಾಭ್ಯಾಸ ಮೊಟಕುಗೊಳಿಸಿ ರಿಯಾಜ್‌ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು.

ಈಗ ರಿಯಾಜ್‌ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಶಿಫಾ ಮೊಬೈಲನ್ನು ಮನೆಯಿಂದ ತೆಗೆದುಕೊಂಡು ಹೋಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next