Advertisement

ಬೆಂಗಳೂರು: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಚಲಿಸುತ್ತಿದ್ದ ದಂಪತಿ ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ದಾಸನಪುರದ ಸಿದ್ದನಹೊಸಹಳ್ಳಿ ನಿವಾಸಿ ರುದ್ರೇಶ್‌(36) ಮತ್ತು ಅವರ ಪತ್ನಿ ಸುನೀತಾ(30) ಮೃತರು. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುರ್ಘ‌ಟನೆ ನಡೆದಿದೆ.

ರುದ್ರೇಶ್‌ ಗಾರೆ ಕಾರ್ಮಿಕರಾಗಿದ್ದು, ಸುನೀತಾ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ಪೀಣ್ಯದಲ್ಲಿರುವ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಹೋಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್‌ ಹೋಗುವಾಗ ದಾಸರಹಳ್ಳಿ ಮೇಲು ಸೇತುವೆ ಮೇಲೆ ಅತೀ ವೇಗವಾಗಿ ಬಂದ ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಕೆಳಗೆ ಬಿದ್ದ ದಂಪತಿ ತಲೆಗೆ ಗಂಭೀರವಾದ ಪೆಟ್ಟು ಬಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಇಬ್ಬರು ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಆರೋಪಿ ವಾಹನ ಸಮೇತ ಪರಾರಿಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next