Advertisement

ಮೀಸಲಾತಿ ಬಗ್ಗೆ ಧೈರ್ಯದ ನಿರ್ಧಾರ: ಸಚಿವ ಪ್ರಹ್ಲಾದ ಜೋಷಿ

11:15 PM Mar 26, 2023 | Team Udayavani |

ಹುಬ್ಬಳ್ಳಿ: ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಬಹುದು. ಇಂಥ ಸಂದರ್ಭದಲ್ಲಿ ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅತ್ಯಂತ ಧೈರ್ಯದಿಂದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ತಿಳಿಸಿದರು.

Advertisement

ರವಿವಾರ ಇಲ್ಲಿನ ಆದರ್ಶ ನಗರದಲ್ಲಿರುವ ಮುಖ್ಯಮಂತ್ರಿಯವರ ನಿವಾಸಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಶಕಗಳಿಂದ ನನೆಗುದಿಗೆ ಬಿದ್ದದ್ದ ನ್ಯಾ| ಸದಾಶಿವ ಆಯೋಗದ ವರದಿಯನ್ನು ಬಸವರಾಜ ಬೊಮ್ಮಾಯಿ ಅನುಷ್ಠಾನಗೊಳಿಸಿದ್ದಾರೆ. ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next