ತಿರುವನಂತಪುರ: ದ್ವೇಷ ಪೂರಿತ ಭಾಷಣ ಮಾಡಿದ ಆರೋಪಕ್ಕೆ ಗುರಿಯಾಗಿರುವ ಮಾಜಿ ಶಾಸಕ ಪಿ.ಸಿ.ಜಾರ್ಜ್ ಅವರಿಗೆ ನೀಡಲಾಗಿರುವ ಜಾಮೀನು ರದ್ದು ಮಾಡಲಾಗಿದೆ.
ಈ ಬಗ್ಗೆ ತಿರುವನಂತಪುರದ ಫಸ್ಟ್ ಕ್ಲಾಸ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬುಧವಾರ ಈ ಆದೇಶ ನೀಡಿದೆ.
ಏ.30ರಂದು ಹಿಂದೂ ಮಹಾಸಭೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಾರ್ಜ್ ಅವರು ಮುಸ್ಲಿಮರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಆರೋಪಿಸಲಾಗಿತ್ತು.
ಮೇ 1ರಂದು ನಡೆದಿದ ವಿಚಾರಣೆ ವೇಳೆ ಅವರಿಗೆ ಜಾಮೀನು ನೀಡಲಾಗಿತ್ತು. ಆದರೆ, ಕೆಲ ದಿನಗಳ ಹಿಂದೆ ಅವರು ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿ ಮಾತನಾಡಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ರದ್ದು ಮಾಡುವ ನಿರ್ಧಾರ ಕೈಗೊಂಡಿದೆ.