Advertisement

18 ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣ: ಶರಣಾದ ಆರೋಪಿಗೆ ನ್ಯಾಯಾಂಗ ಬಂಧನ

08:53 PM Nov 02, 2022 | Team Udayavani |

ಉಪ್ಪಿನಂಗಡಿ: ವಿವಾಹಿತ ಮಹಿಳೆಯೋರ್ವರ ಮೇಲೆ ಕಳೆದ 18 ವರ್ಷಗಳ ಹಿಂದೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯು ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

34ನೇ ನೆಕ್ಕಿಲಾಡಿ ಗ್ರಾಮದ ಪೆಟ್ರೋಲ್‌ ಪಂಪ್‌ ಬಳಿಯ ನಿವಾಸಿ ಧರ್ಮಣ್ಣ ಎಂಬವರ ಪುತ್ರ ಗಿರೀಶ್‌ ಎಂಬಾತ ತನ್ನ ಸ್ನೇಹಿತ 34 ನೆಕ್ಕಿಲಾಡಿಯ ಬೀತಲಪ್ಪುವಿನ ಹಿತೇಶ್‌ ಎಂಬಾತನೊಂದಿಗೆ ಕೂಡಿಕೊಂಡು 2004ರ ಆ. 29ರಂದು ಕರಾಯ ಮೂಲದ ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಆಕೆಯ ಪತಿ ಹಾಗೂ ಮಕ್ಕಳ ಎದುರಿನಲ್ಲೇ ಈಕೆಯನ್ನು ಅಮಾನುಷವಾಗಿ ಅತ್ಯಾಚಾರ ನಡೆಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದರೂ ಆರೋಪಿ ಗಿರೀಶ್‌ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದನು. ಇದೀಗ ಆತ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದು, ಈತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯಾಗಿದ್ದುಕೊಂಡು ತಲೆಮರೆಸಿಕೊಂಡಿದ್ದ ಹಿತೇಶ್‌ ಎಂಬಾತನನ್ನು 2018ರ ಮಾರ್ಚ್‌ನಲ್ಲಿ ಉಪ್ಪಿನಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆತನ ವಿಚಾರಣೆಯ ಬಳಿಕ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಈ ಪ್ರಕರಣದಿಂದ ಆತನನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿತ್ತು. ಆದರೆ ಇದನ್ನು ಪ್ರಶ್ನಿಸಿ ಸರಕಾರವು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಅದು ವಿಚಾರಣೆಯ ಹಂತದಲ್ಲಿದೆ. ಈ ನಡುವೆ ಈ ಪ್ರಕರಣದ ಮತ್ತೋರ್ವ ಆರೋಪಿ ಗಿರೀಶ್‌ ಕೂಡ ಈಗ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next