ಉತ್ತರಪ್ರದೇಶ: ಅಕ್ಟೋಬರ್ 2021 ರ ಹಿಂಸಾಚಾರದಲ್ಲಿ ನಾಲ್ವರು ರೈತರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿ ಇತರ 13 ಜನರ ವಿರುದ್ಧ ಲಖಿಂಪುರ ಖೇರಿ ನ್ಯಾಯಾಲಯ ಮಂಗಳವಾರ ಆರೋಪಗಳನ್ನು ದಾಖಲಿಸಿಕೊಂಡಿದೆ.
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸುಶೀಲ್ ಶ್ರೀವಾಸ್ತವ ಅವರ ನ್ಯಾಯಾಲಯದಲ್ಲಿ, ಆಶಿಶ್ ಮಿಶ್ರಾ ಸೇರಿದಂತೆ ಎಲ್ಲಾ 13 ಆರೋಪಿಗಳನ್ನು ಕೊಲೆ ಮತ್ತು ಕೊಲೆ ಯತ್ನ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಜೊತೆಗೆ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 16ಕ್ಕೆ ನಿಗದಿಪಡಿಸಿದ್ದಾರೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ‘ಮೋನು’ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302, 307, 326 ಮತ್ತು 147 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ಅಕ್ಟೋಬರ್ 3, 2021 ರಂದು, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಭುಗಿಲೆದ್ದ ಹಿಂಸಾಚಾರದಲ್ಲಿ ಲಖಿಂಪುರ ಖೇರಿಯ ಟಿಕುನಿಯಾದಲ್ಲಿ ಎಂಟು ಜನರು ಸಾವನ್ನಪ್ಪಿದರು.
ಉತ್ತರ ಪ್ರದೇಶ ಪೊಲೀಸ್ ಎಫ್‌ಐಆರ್ ಪ್ರಕಾರ, ಆಶಿಶ್ ಮಿಶ್ರಾ ಕುಳಿತಿದ್ದ ಎಸ್‌ಯುವಿ ಕಾರು ಢಿಕ್ಕಿ ಹೊಡೆಸಿ ನಾಲ್ವರು ರೈತರನ್ನು ಕೊಳ್ಳಲಾಗಿದೆ ಎಂದು ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಕಟೀಲು ಐದನೇ ಮೇಳದ ಚೌಕಿ ಸಹಾಯಕ ಹೃದಯಾಘಾತದಿಂದ ನಿಧನ