Advertisement

ಗೋಕಾಕ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಎಂ ಯಡಿಯೂರಪ್ಪಗೆ ಸಮನ್ಸ್

03:03 PM Jul 25, 2020 | keerthan |

ಬೆಳಗಾವಿ: ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವಿಲ್ ಜಡ್ಜ್ ಜೆಎಂಎಫ್ ಸಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

Advertisement

ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು, ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು. ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಗೋಕಾಕ್ ಪೊಲೀಸ್ ಠಾಣೆಯಿಂದ ನ್ಯಾಯಾಲಯದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿತ್ತು. ಆದರೆ ನ್ಯಾಯಾಲಯ ಇದನ್ನು ತಿರಸ್ಕರಿಸಿ ಮುಖ್ಯಮಂತ್ರಿ ಬಿ .ಎಸ್ ಯಡಿಯೂರಪ್ಪ ಅವರಿಗೆ ಸೆಪ್ಟೆಂಬರ್ 1ರಂದು ನ್ಯಾಯಾಲಯಕ್ಕೆ ಹಾಜರಾಗುತೆ ಸಮನ್ಸ್ ಜಾರಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next