Advertisement

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

07:23 PM May 13, 2024 | Team Udayavani |

ಬೆಂಗಳೂರು: ಮಹಿಳೆಯೊಬ್ಬರ ಕಿಡ್ನಾಪ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಜೆಡಿಎಸ್ ಹಿರಿಯ ನಾಯಕ, ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಸೋಮವಾರ ಸಂಜೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.

Advertisement

ಜಾಮೀನು ಪ್ರತಿ ಜೈಲು ಅಧಿಕಾರಿಗಳ ಕೈಗೆ ಸೇರಬೇಕಾಗಿರುವ ಹಿನ್ನಲೆಯಲ್ಲಿ ನಾಳೆ(ಮಂಗಳವಾರ)ಬೆಳಗ್ಗೆ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಯಾಗಲಿದ್ದಾರೆ.

ಇಬ್ಬರ ಶ್ಯೂರಿಟಿ , 5 ಲಕ್ಷ ರೂ. ಬಾಂಡ್ ನೀಡಬೇಕು. ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು, ಎಸ್ ಐಟಿ ಅಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂಬ ಷರತ್ತು ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

ಬೆಂಗಳೂರಿನ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ಮೇ 4 ರಂದು ಹೆಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧನಕ್ಕೊಳಪಡಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next