Advertisement

ಕೋಟ್ಪಾ ದಾಳಿ-68 ಪ್ರಕರಣ ದಾಖಲು

03:09 PM Dec 11, 2018 | Team Udayavani |

ದಾವಣಗೆರೆ: ಜಿಲ್ಲಾ ತಂಬಾಕು ನಿಯಂತ್ರಣ ವಿಶೇಷ ತಂಡ ಸೋಮವಾರ ವಿವಿಧೆಡೆ ದಾಳಿ ನಡೆಸಿ ಒಟ್ಟು 68 ಪ್ರಕರಣ ದಾಖಲಿಸಿಕೊಂಡು ಸ್ಥಳದಲ್ಲಿಯೇ 7,200 ರೂಪಾಯಿ ದಂಡ ವಸೂಲು ಮಾಡಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಿಕ್ಷಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹಾಗೂ ಪೊಲೀಸ್‌ ಇಲಾಖೆ ಸಹಯೋಗದೊಂದಿಗೆ ಬಸವನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಟೇಲ್‌, ಬಾರ್‌ ಮತ್ತು ರೆಸ್ಟೋರೆಂಟ್‌, ಪಾನ್‌ಶಾಪ್‌, ಬಸ್‌ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಲಾಯಿತು. 

Advertisement

ಕೋಟ್ಪಾ ಕಾಯ್ದೆ ಸೆಕ್ಷನ್‌ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿದೆ. ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್‌ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಸೆಕ್ಷನ್‌ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‌ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧದ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.

ರಾಜ್ಯ ತಂಬಾಕು ನಿಯಂತ್ರಣ ತಂಡದ ವಿಭಾಗೀಯ ಸಂಯೋಜಕ ಮಹಾಂತೇಶ್‌ ಉಳ್ಳಾಗಡ್ಡಿ, ಆರೋಗ್ಯ ನಿರೀಕ್ಷಕ ಆರ್‌. ಪಿ. ಕುಪಸ್ತ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಮಾಪತಿ, ಹಿರಿಯ ಆರೋಗ್ಯ ಸಹಾಯಕರಾದ ವೆಂಕಟಾಚಲ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ್‌ ಕಲಹಾಳ, ಬಸವನಗರ ಪಿಎಸ್‌ಐ ವೀರೇಶ್‌, ಆರೋಗ್ಯ ನಿರೀಕ್ಷಕ ಪ್ರಕಾಶ್‌, ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next