Advertisement

Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!

09:44 PM Sep 13, 2024 | Esha Prasanna |

ಶಿವಮೊಗ್ಗ: ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ

Advertisement

ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ  9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ ಪೊಲೀಸ್‌ ಇನ್ಸ್‌ಪೆಕ್ಟರ್‌ ಲಕ್ಷ್ಮೀಪತಿ ಆರ್.ಎಲ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಆರೋಪ ದೃಢಪಟ್ಟ ಹಿನ್ನೆಲೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮೋಹನ್.ಜೆ.ಎಸ್ 20 ವರ್ಷ ಕಠಿಣ ಶಿಕ್ಷೆ, 2.10 ಲಕ್ಷ ರೂ. ದಂಡ ಅಥವಾ ದಂಡ ಕಟ್ಟಲು ವಿಫಲವಾದರೆ ಒಂದು ವರ್ಷ ಹೆಚ್ಚುವರಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರಿ ಅಭಿಯೋಜಕರಾಗಿ ಶ್ರೀಧರ್.ಎಚ್.ಆರ್ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.