Advertisement

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

12:48 AM Jun 17, 2024 | Team Udayavani |

ಶ್ರೀನಗರ: ಪೋಕ್ಸೋ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಬಂಧನಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದ್ದು ಸರಿಯಲ್ಲ. ನ್ಯಾಯ ತೀರ್ಮಾನದಲ್ಲಿ ಹೈಕೋರ್ಟ್‌ ಆಯ್ಕೆಯ ತೀರ್ಮಾನ ಕೈಗೊಂಡಿದೆ ಎಂದು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಆಕ್ಷೇಪಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿದ ಅವರು, ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌, ಝಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಗಂಭೀರವಲ್ಲದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇದರ ಹೊರತಾಗಿಯೂ ಕೂಡ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಗಿದೆ. ಆದರೆ ಯಡಿಯೂರಪ್ಪನವರಿಗೆ ರಕ್ಷಣೆ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next