ಮುಂಬಯಿ: ಚಿತ್ರನಟಿ ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧದ ದರೋಡೆಕೋರ ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆ ಇಂದು ಪಟಿಯಾಲ ಹೌಸ್ ಕೋರ್ಟ್‌ನಲ್ಲಿ ನಡೆಯಬೇಕಿತ್ತು, ಆದರೆ ಪ್ರಕರಣವನ್ನು ನ್ಯಾಯಾಲಯ ಮುಂದೂಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪಟಿಯಾಲ ಹೌಸ್ ಕೋರ್ಟ್‌ಗೆ ವಾದ ಮಂಡಿಸಲು ನಟಿ ಜಾಕ್ವೆಲಿನ್ ಫರ್ನಾಂಡೀಸ್ ಆಗಮಿಸಿದ್ದರು. ಆದರೆ ನ್ಯಾಯಾಲಯದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಹಾಗಾಗಿ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.
ಈ ಹಿಂದೆ, ದರೋಡೆಕೋರ ಸುಖೇಶ್ ಚಂದ್ರಶೇಖರ್‌ಗೆ ಸಂಬಂಧಿಸಿದ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ನವೆಂಬರ್ 15 ರಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಜಾಮೀನು ನೀಡಿತ್ತು. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೆಂದರ್ ಮಲಿಕ್ ಅವರು 2 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿಯ ಆಧಾರದ ಮೇಲೆ ನಟಿನಿಗೆ ಜಾಮೀನು ನೀಡಿತ್ತು.
ಇದನ್ನೂ ಓದಿ: ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ಅರೋಗ್ಯ ಸ್ಥಿತಿ ಗಂಭೀರ, ಮುಂದುವರೆದ ಚಿಕಿತ್ಸೆ