Advertisement

ಪುತ್ರಿಯಿಂದಲೇ ತಂದೆ ವಿರುದ್ಧ ಅತ್ಯಾಚಾರ ದೂರು: ಖುಲಾಸೆ

02:32 AM Mar 03, 2023 | Team Udayavani |

ಮಂಗಳೂರು: ಇಬ್ಬರು ಪುತ್ರಿಯರೇ ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಒಂದು ಪ್ರಕರಣ ನಗರದ ಪೋಕ್ಸೋ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ.

Advertisement

2021ರ ಜೂನ್‌ ತಿಂಗಳಿನಲ್ಲಿ ಕಾಟಿಪಳ್ಳದ ನಿವಾಸಿ ಅಬ್ದುಲ್‌ ಹಕೀಂ (48) ಅವರ ಮೇಲೆ ಅವರ ಇಬ್ಬರು ಅಪ್ರಾಪ್ತ ವಯಸ್ಕ ಹೆಣ್ಣು ಮಕ್ಕಳು ತಂದೆ ನಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿದ್ದರು. ಪ್ರಕರಣದ ಕುರಿತು ಮಂಗಳೂರಿನ ಮಹಿಳಾ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ಪೋಕ್ಸೋ ಕಾಯ್ದೆಯಡಿ ದಾಖಲಾಗಿತ್ತು.

ಕಿರಿಯ ಮಗಳು ತನ್ನ ತಂದೆಯು ಸತತ ಮೂರು ವರ್ಷಗಳಿಂದ ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಿದ್ದಳು. ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎರಡನೇ ಎಫ್‌ಟಿಎಸ್‌ಸಿ ಪೋಕ್ಸೋ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಯ ಮೇಲೆ ಆರೋಪ ಸಾಬೀತು ಮಾಡಲು ಯಾವುದೇ ಸರಿಯಾದ ಸಾಕ್ಷಾಧಾರಗಳು ಇಲ್ಲ ಎಂದು ನಿರ್ಧರಿಸಿತು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಆರೋಪಿಯನ್ನು ಬಿಡುಗಡೆ ಮಾಡಲು ಆದೇಶ ಮಾಡಿದ್ದಾರೆ. ಆರೋಪಿ ಕಳೆದ ಒಂದೂವರೆ ವರ್ಷಗಳಿಂದ ಜೈಲುವಾಸ ಅನಭವಿಸಿದ್ದರು. ಆರೋಪಿ ಪರ ಆಸಿಫ್‌ ಬೈಕಾಡಿ, ಮಹಮ್ಮದ್‌ ಅಸ್ಗರ್‌ ಮುಡಿಪು, ರುಬಿಯಾ ಅಖ್ತರ್‌, ಶ್ರೀನಿಧಿ ಪ್ರಕಾಶ್‌, ನಿರೀಕ್ಷಾ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next