Advertisement
ಗ್ರಾಮೀಣ ಭಾಗದಲ್ಲಿ ಮಾತ್ರ 1ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ಹತ್ತಿರದ ಸರಕಾರಿ ಆಸ್ಪತ್ರೆ, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಪಡೆಯಬೇಕು.
Related Articles
Advertisement
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಹಾಗೂ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಪೂರ್ಣಗೊಂಡು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಹತ್ತಿರದ ಸರಕಾರಿ ಆಸ್ಪತ್ರೆ, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯ ಬಹುದು.
ರಾಜ್ಯ ಸರಕಾರ ಗುರುತಿಸಿರುವ 18 ಆದ್ಯತಾ ಗುಂಪುಗಳಿಗೆ (ಅನುಬಂಧ-2 ) ಲಸಿಕಾಕರಣದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಡಿಎಚ್‌ಓ ಡಾ| ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.