Advertisement

ಭಾರತದಲ್ಲಿ 11,466 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆ

11:13 AM Nov 10, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 11,466 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,43,88,579ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ನವೆಂಬರ್ 10) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,39,683ಕ್ಕೆ ಇಳಿಕೆಯಾಗಿದ್ದು, ಇದು 264 ದಿನಗಳ ಕನಿಷ್ಠ ಸಂಖ್ಯೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ. ಕಳೆದ 24ಗಂಟೆಗಳ ಅವಧಿಯಲ್ಲಿ 955 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.

ಸತತ 33 ದಿನಗಳಿಂದ 20,000ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ. 136 ದಿನಗಳಿಂದ ದಿನಂಪ್ರತಿ 50,000 ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದೆ ಎಂದು ಅಂಕಿಅಂಶ ತಿಳಿಸಿದೆ.

ಕಳೆದ 24ಗಂಟೆಗಳಲ್ಲಿ 460 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,61,849ಕ್ಕೆ ಏರಿಕೆಯಾಗಿದೆ. ಅಷ್ಟೇ ಅಲ್ಲ ಈವರೆಗೆ 3,37,87,047 ಮಂದಿ ಗುಣಮುಖರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next