Advertisement

ಕೋವಿಡ್ 19 ಬಗ್ಗೆ ಅನಗತ್ಯ ಭಯಬೇಡ, ಶೇ.02ರಷ್ಟು ಮಾತ್ರ ಪಾಸಿಟಿವ್ ಪ್ರಕರಣ ಪತ್ತೆ; ಕೇಂದ್ರ

09:14 AM Apr 11, 2020 | Nagendra Trasi |

ನವದೆಹಲಿ: ಕೋವಿಡ್ 19 ವೈರಸ್ ಹರಡುವ ವಿಚಾರಕ್ಕೆ ಸಂಬಂಧಿಸಿದಂತೆ ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ
ಸೋಂಕು ಹರಡುವ ಪ್ರಮಾಣ ತುಂಬಾ ಕಡಿಮೆ. ಅಲ್ಲದೆ, ವೈರಸ್ ನಿಂದ ಚೇತರಿಸಿಕೊಳ್ಳುವವರ ಸಂಖ್ಯೆಯೂ ಹೆಚ್ಚಳವಾಗಿದ್ದು
ಆಶಾದಾಯಕವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Advertisement

ಕೋವಿಡ್ ವೈರಸ್ ಹರಡುವ ಪ್ರಮಾಣ ಭಾರತದಲ್ಲಿ ಅತ್ಯಂತ ಕಡಿಮೆ ಇದೆ. ಗುರುವಾರ ಸುಮಾರು 16,002 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಈ ಪೈಕಿ ಕೇವಲ ಶೇ. 0.2 ರಷ್ಟು ಮಾತ್ರ ಸೋಂಕು ದೃಢ ಪಟ್ಟಿವೆ. ವ್ಯಕ್ತಿಗಳಿಂದ ಸಂಗ್ರಹಿಸಿದ ಮಾದರಿಗಳನ್ನು ಆಧರಿಸಿ ನಡೆಸಿದ ಪರೀಕ್ಷೆಯಲ್ಲಿ ಸೋಂಕಿನ ಪ್ರಮಾಣ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಶುಕ್ರವಾರ ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಲಾಕ್ ಡೌನ್ ನಂತಹ ಕಠಿಣ ಕ್ರಮಗಳು ಕೋವಿಡ್ ಪಸರಿಸುವುದಕ್ಕೆ ಬಹುತೇಕ ಕಡಿವಾಣ ಹಾಕಿದೆ. ದೇಶದ 130 ಕೋಟಿ ಜನಸಂಖ್ಯೆಯಲ್ಲಿ ದಿನಂಪ್ರತಿ 400- 500 ಪ್ರಕರಣಗಳು ಪತ್ತೆಯಾಗುತ್ತಿದೆ. ದಿಲ್ಲಿಯ ಮಸೀದಿ ಘಟನೆಯಿಂದ ಸೋಂಕಿನ ಸಂಖ್ಯೆ ಸ್ವಲ್ಪ ಹೆಚ್ಚಾಗಿದ್ದು ಹೊರತುಪಡಿಸಿದರೆ, ಭಾರತ ಅತ್ಯಂತ ಕಡಿಮೆ ಸೋಂಕಿನ ಪ್ರಮಾಣ ಹೊಂದಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next