Advertisement

ಕೋವಿಡ್-19: 2 ಕೋಟಿ ಅನುದಾನ ನೀಡಿದ ಕೇಂದ್ರದ ಸಂಸತ್ ಸದಸ್ಯ ಪಿ.ಸಿ.ಮೋಹನ್

10:43 AM Mar 27, 2020 | sudhir |

ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್-19 ಪ್ರತ್ಯೇಕ ನಿಗಾ ಘಟಕದಲ್ಲಿ ತುರ್ತಾಗಿ ವೆಂಟಿಲೇಟರ್ ಗಳು, ಅಗತ್ಯ ವೈದ್ಯಕೀಯ ಪರಿಕರಗಳ ಖರೀದಿಗೆ ಮೋಹನ್ ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 2 ಕೋಟಿ ರೂ. ಮೊತ್ತವನ್ನು ಇಂದು ಬಿಡುಗಡೆ ಮಾಡಿದ್ದಾರೆ.

Advertisement

ಕೊರೋನಾ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1700 ಹಾಸಿಗೆಗಳ ಪ್ರತ್ಯೇಕ ಘಟಕ ಘೋಷಣೆಯಾದ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲ ಉಪಕರಣಗಳ ಸಿದ್ಧತೆಗೆ ಜನಪ್ರತಿನಿಧಿಗಳು ಕೂಡ ಕೈಜೋಡಿಸಿದ್ದಾರೆ. ಬಿಜೆಪಿ ಸಂಸದ ಪಿ.ಸಿ.ಮೋಹನ್ ಅವರು ಇಂದು ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದು, ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸೇರಿದಂತೆ ಅಗತ್ಯ ಉಪಕರಣಗಳ ಖರೀದಿಗೆ ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 2 ಕೋಟಿ ರೂ.ಗಳನ್ನು ನೀಡಿದ್ದಾರೆ.

ಕೊರೋನ ಎದುರಿಸಲು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಶ್ಲಾಘಿಸಿರುವ ಮೋಹನ್, ಈಗಾಗಲೇ ರಾಜ್ಯ ಸರ್ಕಾರವ 1700 ಹಾಸಿಗೆಗಳನ್ನೊಳಗೊಂಡ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸಮುಚ್ಚಯವನ್ನು ಕೋವಿಡ್-19 ಸೋಂಕಿತರಿಗಾಗಿ ಪ್ರತ್ಯೇಕವಾಗಿರಿಸಿದ್ದು, ಈ ಆಸ್ಪತ್ರೆ ಸಮುಚ್ಚಯಗಳ ತೀವ್ರ ನಿಗಾ ಘಟಕಗಳಲ್ಲಿ ಅತ್ಯಾವಶ್ಯವಾಗಿರುವ ವೆಂಟಿಲೇಟರ್ ಸೌಲಭ್ಯ, ಎನ್-95 ರೆಸ್ಪಿರೇಟರ್ಸ್ ಮತ್ತು ಸರ್ಜಿಕಲ್ ಮಾಸ್ಕ್ ಸೇರಿದಂತೆ ಪರ್ಸನಲ್ ಪ್ರೊಟೆಕ್ಟೀವ್ ಉಪಕರಣಗಳೇ ಮೊದಲಾದ ಅಗತ್ಯ ಪರಿಕರಗಳನ್ನು ತುರ್ತಾಗಿ ಖರೀದಿಸಲು ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 2 ಕೋಟಿ ರೂ. ನೀಡುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಬಿಕ್ಕಟ್ಟನ್ನು ಎದುರಿಸಲು ಸಾಧ್ಯವಿರುವ ಎಲ್ಲಾ ಸಹಕಾರವನ್ನು ತಾವು ಸರ್ಕಾರಕ್ಕೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಡಿ.ಸಿ.ಎಂ ಅಶ್ವತ್ಥನಾರಾಯಣ, ಸಚಿವರುಗಳಾದ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್, ಸುರೇಶ್ ಕುಮಾರ್, ಡಾ ಕೆ ಸುಧಾಕರ್ ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next