ಹೊಸದಿಲ್ಲಿ: ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟವರು ಏಪ್ರಿಲ್ 10ರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಮೊದಲ ಮತ್ತು ಎರಡನೇ ಡೋಸ್‌ಗಳಿಗೆ ಸರ್ಕಾರಿ ಲಸಿಕೆ ಕೇಂದ್ರಗಳ ಮೂಲಕ ನಡೆಯುತ್ತಿರುವ ಉಚಿತ ಲಸಿಕೆ ಕಾರ್ಯಕ್ರಮ ಮುಂದುವರಿಯುತ್ತದೆ ಎಂದು ಕೇಂದ್ರ ತಿಳಿಸಿದೆ.
ಎರಡನೇ ಡೋಸ್ ಲಸಿಕೆ ಪಡೆದು 9 ತಿಂಗಳ ಅವಧಿ ಪೂರೈಸಿದ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಬೂಸ್ಟರ್ ಡೋಸ್ ಪಡೆಯಲು ಅರ್ಹರಾಗಿರುತ್ತಾರೆ. ಈ ವ್ಯವಸ್ಥೆಯು ರವಿವಾರದಿಂದ ಎಲ್ಲಾ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಭ್ಯವಿರುತ್ತಾರೆ.
ದೇಶದಲ್ಲಿ ಇದುವರೆಗೆ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಮತ್ತು 60+ ಜನಸಂಖ್ಯೆಯ ಗುಂಪಿಗೆ 2.4 ಕೋಟಿಗೂ ಹೆಚ್ಚು ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗಿದೆ.
ಇದನ್ನೂ ಓದಿ:ಮೆಟ್ರೋದಲ್ಲೇ “ಬೆಂಗಳೂರು ರೌಂಡ್ಸ್’ಗೆ ಚಿಂತನೆ; ಪ್ರವಾಸಿ ತಾಣಗಳ ದರ್ಶನ
Related Articles
ದೇಶದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಇದುವರೆಗೆ ಶೇ.96 ಜನರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ. ಶೇ.83ರಷ್ಟು ಮಂದಿ ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ.